ಮಧ್ಯ ಪ್ರದೇಶ ಸರ್ಕಾರದಿಂದ ಲವ್ ಜಿಹಾದ್ ತಡೆಗೆ ಕಾನೂನು, ಉಲ್ಲಂಘಿಸಿದರೆ 5 ವರ್ಷ ಜೈಲು

ಮಧ್ಯ ಪ್ರದೇಶದಲ್ಲಿ ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ 15 ದಿನದಲ್ಲೇ ಲವ್ ಜಿಹಾದ್ ತಡೆಗೆ ಕಠಿಣ ಕಾನೂನು ಜಾರಿಗೆ ತರುವ ಸುಳಿವು ನೀಡಿದ್ದು ಶಿವರಾಜ್ ಸಿಂಗ್ ಚೌಹಾಣ್ ಅವರು,...
ಶಿವರಾಜ್ ಸಿಂಗ್ ಚೌಹಾಣ್
ಶಿವರಾಜ್ ಸಿಂಗ್ ಚೌಹಾಣ್

ಭೋಪಾಲ್: ಮಧ್ಯ ಪ್ರದೇಶದಲ್ಲಿ ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ 15 ದಿನದಲ್ಲೇ ಲವ್ ಜಿಹಾದ್ ತಡೆಗೆ ಕಠಿಣ ಕಾನೂನು ಜಾರಿಗೆ ತರುವ ಸುಳಿವು ನೀಡಿದ್ದು ಶಿವರಾಜ್ ಸಿಂಗ್ ಚೌಹಾಣ್ ಅವರು, ವಿವಾಹದ ಕಾರಣಕ್ಕಾಗಿ ನಡೆಯುವ ಧಾರ್ಮಿಕ ಮತಾಂತರ ನಿಷೇಧಿಸುವ ಮಸೂದೆಯನ್ನು ವಿಧಾನಸಭೆಯಲ್ಲಿ ಅಂಗೀಕರಿಸುವುದಾಗಿ ಮಂಗಳವಾರ ಹೇಳಿದ್ದಾರೆ.

ಮುಂಬರುವ ಅಧಿವೇಶನದಲ್ಲಿ ಮಧ್ಯ ಪ್ರದೇಶದ ಧರ್ಮ ಸ್ವತಂತ್ರ 2020 ಮಸೂದೆಯನ್ನು ಮಂಡಿಸಲು ನಾವು ಸಿದ್ಧತೆ ನಡೆಸಿದ್ದೇವೆ. ಈ ಮಸೂದೆಯು ಬಲವಂತವಾಗಿ, ಮೋಸದಿಂದ ಅಥವಾ ಧಾರ್ಮಿಕ ಮತಾಂತರಕ್ಕಾಗಿ ನಡೆಯುವ ಎಲ್ಲಾ ವಿವಾಹಗಳನ್ನು ಅನೂರ್ಜಿತಗೊಳಿಸಲಿದೆ ಎಂದು ಸಿಎಂ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.

ಲವ್ ಜಿಹಾದ್ ನಲ್ಲಿ ಭಾಗಿಯಾಗುವ ಆರೋಪಿಗಳಿಗೆ ಐದು ವರ್ಷಗಳವರೆಗೆ ಕಠಿಣ ಜೈಲು ಶಿಕ್ಷೆ ವಿಧಿಸಲು ಹೊಸ ಕಾನೂನಿನಲ್ಲಿ ಅವಕಾಶ ಇದೆ”ಎಂದು ಮಧ್ಯ ಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಇಂದು ಭೋಪಾಲ್‌ನಲ್ಲಿ ಪತ್ರಕರ್ತರಿಗೆ ತಿಳಿಸಿದ್ದಾರೆ.

ಈಗಾಗಲೇ, ಬಿಜೆಪಿ ಆಡಳಿತವಿರುವ ಮೂರು ರಾಜ್ಯಗಳಾದ ಉತ್ತರ ಪ್ರದೇಶ, ಹರಿಯಾಣ ಮತ್ತು ಕರ್ನಾಟಕ - 'ಲವ್ ಜಿಹಾದ್' ವಿರುದ್ಧ ಕಠಿಣ ಕಾನೂನು ಜಾರಿಗೊಳಿಸುವ ಬಗ್ಗೆ ಸುಳಿವು ನೀಡಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com