ಕೊರೋನಾ ಅಲೆ: ದೆಹಲಿಯಲ್ಲಿ ಮದುವೆಗಿನ್ನು 50 ಜನಕ್ಕೆ ಮಾತ್ರ ಅವಕಾಶ!

ದೇಶದ ರಾಜಧಾನಿಯಲ್ಲಿ ಕೊರೋನಾ ಸೋಂಕಿನ ಎರಡನೇ ಅಲೆ ಕಾಣಿಸಿಕೊಳ್ಳುತ್ತಿರುವ ಹಿನ್ನಲೆಯಲ್ಲಿ ಮದುವೆ ಕಾರ್ಯಕ್ರಮಕ್ಕೆ ಕೇವಲ 50 ಜನರಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಿ ಹೊಸ ಆದೇಶ ಹೊರಡಿಸಿದೆ.
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್

ನವದೆಹಲಿ: ದೇಶದ ರಾಜಧಾನಿಯಲ್ಲಿ ಕೊರೋನಾ ಸೋಂಕಿನ ಎರಡನೇ ಅಲೆ ಕಾಣಿಸಿಕೊಳ್ಳುತ್ತಿರುವ ಹಿನ್ನಲೆಯಲ್ಲಿ ಮದುವೆ ಕಾರ್ಯಕ್ರಮಕ್ಕೆ ಕೇವಲ 50 ಜನರಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಿ ಹೊಸ ಆದೇಶ ಹೊರಡಿಸಿದೆ.

ಈ ಮೊದಲು ರಾಜ್ಯ ಸರ್ಕಾರ, ಮದುವೆ ಕಾರ್ಯಕ್ರಮಕ್ಕೆ 200 ಜನರಿಗೆ ನೀಡಿದ್ದ ಅವಕಾಶವನ್ನು 50 ಜನಕ್ಕೆ ಇಳಿಸಿದ್ದು ಈ ಮೂಲಕ ದೆಹಲಿಯಲ್ಲಿ ಕೊರೋನಾ ಸೋಂಕು ತಡೆಯಲು ಸರ್ಕಾರ ಮತ್ತಷ್ಟು ಬಿಗಿ ಕ್ರಮ ಕೈಗೊಂಡಿದೆ.

ದೆಹಲಿಯಲ್ಲಿ ಕೊರೋನಾ ಸೋಂಕು  ಹೆಚ್ಚಾಗುತ್ತಿರುವ  ಕಾರಣ ದೆಹಲಿಯಲ್ಲಿ 50ಕ್ಕೂ ಹೆಚ್ಚು ಜನರನ್ನು ಮದುವೆಗೆ ಆಹ್ವಾನಿಸುವಂತಿಲ್ಲ ಸರ್ಕಾರ ಬುಧವಾರ ಹೊಸ ಆದೇಶ ಹೊರಡಿಸಿದೆ.

ನವೆಂಬರ್ 14ಕ್ಕೆ ಕೊನೆಗೊಂಡ ವಾರದಲ್ಲಿ ದೆಹಲಿಯಲ್ಲಿ ಕೊರೋನಾ ಸೋಂಕಿನ ಹೊಸ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಸರ್ಕಾರ ಈ ಹಿಂದಿನ 200 ಜನರ ಆದೇಶ ಪರಿಷ್ಕರಣೆ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com