ಗುಜರಾತ್: ಎರಡು ಟ್ರಕ್'ಗಳ ಮುಖಾಮುಖಿ ಡಿಕ್ಕಿ, 9 ಮಂದಿ ದುರ್ಮರಣ, 17ಕ್ಕೂ ಹೆಚ್ಚು ಜನರಿಗೆ ಗಾಯ

ಗುಜರಾತ್ ರಾಜ್ಯದ ವಡೋದರಾದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎರಡು ಟ್ರಕ್'ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಸಾವನ್ನಪ್ಪಿ, 17ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ. 
ಅಪಘಾತ ನಡೆದ ಸ್ಥಳ ಹಾಗೂ ಗಾಯಾಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು.
ಅಪಘಾತ ನಡೆದ ಸ್ಥಳ ಹಾಗೂ ಗಾಯಾಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು.

ವಡೋದರಾ: ಗುಜರಾತ್ ರಾಜ್ಯದ ವಡೋದರಾದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎರಡು ಟ್ರಕ್'ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಸಾವನ್ನಪ್ಪಿ, 17ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ. 

ವಡೋದರಾದ ವಾಘೋಡಿಯಾ ಕ್ರಾಸ್ ರಸ್ತೆ ಬಳಿಯ ಇರುವ ಸೇತುವೆ ಬಳಿ ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ. 

ಅಪಘಾತ ಸುದ್ದಿ ತಿಳಿಯುತ್ತಿದ್ದಂತೆಯ್ ಸ್ಥಳಕ್ಕಾಗಮಿಸಿರುವ ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದು, ಮೃತಪಟ್ಟರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆಯೇ ಸ್ಥಳದಲ್ಲಿ ಭಾರೀ ಸಂಚಾರ ದಟ್ಟಣೆ ಎದುರಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ದುರ್ಘಟನೆಗೆ ಪ್ರಧಾನಿ ಮೋದಿ, ಉಪ ರಾಷ್ಟ್ರಪತಿ ಸಂತಾಪ
ವಡೋದರಾದಲ್ಲಿ ಸಂಭವಿಸಿದ ಭೀಕರ ಅಪಘಾತ ಘಟನೆಗೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮೋದಿಯವರು, ವಡೋದರಾದಲ್ಲಿ ಸಂಭವಿಸಿದ ಅಪಘಾತ ಘಟನೆ ತೀವ್ರ ನೋವನ್ನು ತಂದಿದೆ. ದುರ್ಘಟನೆಯಲ್ಲಿ ಮೃತಪಟ್ಟ ಕುಟುಂಬಸ್ಥರಿಗಾಗಿ ತೀವ್ರ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಘಟನಾ ಸ್ಥಳದಲ್ಲಿ ಅಗತ್ಯ ನೆರವು ಕಾರ್ಯಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. 

ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, "ಗುಜರಾತ್‌ನ ವಡೋದರಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪ್ರಾಣಹಾನಿ ಬಗ್ಗೆ ತಿಳಿದು ತೀವ್ರವಾಗಿ ದುಃಖಿತರಾಗಿದ್ದೇನೆ. ದುಃಖಿತ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಪ್ರಾರ್ಥಿಸುತ್ತೇನೆ” ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com