10 ವರ್ಷಕ್ಕಿಂತ ಕಡಿಮೆ, 65 ವರ್ಷಕ್ಕಿಂತ ಮೇಲ್ಪಟ್ಟವರಿಗೆ ದರ್ಶನಕ್ಕೆ ಅವಕಾಶ ಇಲ್ಲ; ಸುಳ್ಳು ಸುದ್ದಿಗಳಿಗೆ ಕಿವಿಗೊಡದಂತೆ ಭಕ್ತರಿಗೆ ಟಿಟಿಡಿ ಮನವಿ

ತಿರುಮಲ ತಿರುಪತಿ ದೇಗುಲ ದರ್ಶನ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವದಂತಿಗಳ ಕುರಿತಂತೆ ಟಿಟಿಡಿ ಆಡಳಿತ ಮಂಡಳಿ ಮಹತ್ವದ ಸ್ಪಷ್ಟನೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ತಿರುಮಲ: ತಿರುಮಲ ತಿರುಪತಿ ದೇಗುಲ ದರ್ಶನ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವದಂತಿಗಳ ಕುರಿತಂತೆ ಟಿಟಿಡಿ ಆಡಳಿತ ಮಂಡಳಿ ಮಹತ್ವದ ಸ್ಪಷ್ಟನೆ ನೀಡಿದೆ.

ತಿಮ್ಮಪ್ಪನ ದೇಗುಲಕ್ಕೆ ಹಿರಿಯ ನಾಗರಿಕರ ಪ್ರವೇಶಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವದಂತಿಗಳು ಸಂಪೂರ್ಣ ಸುಳ್ಳು ಎಂದು ತಿರುಮಲ ತಿರುಪತಿ ದೇವಸ್ತಾನಂ (ಟಿಟಿಡಿ) ಬುಧವಾರ ಸ್ಪಷ್ಟಪಡಿಸಿದ್ದು, ಜನರು ಇಂತಹ ಸುದ್ದಿಗಳನ್ನು ನಂಬಬಾರದು  ಎಂದು ಮನವಿ ಮಾಡಿದೆ.

ಕೋವಿಡ್‍ ನಿರ್ಬಂಧಗಳಿಂದಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಾರ್ಗಸೂಚಿಗಳಂತೆ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಮತ್ತು 65 ವರ್ಷಕ್ಕಿಂತ ಮೇಲ್ಪಟ್ಟವರಿಗೆ ದರ್ಶನಕ್ಕೆ ಅವಕಾಶ ನೀಡುತ್ತಿಲ್ಲ ಎಂದು ಟಿಟಿಡಿ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ. ಯಾವುದೇ ವದಂತಿಗಳು  ಮತ್ತು ಸುಳ್ಳು ಸುದ್ದಿಗಳನ್ನು ನಂಬಬಾರದೆಂದು ಭಕ್ತರಿಗೆ ಮನವಿ ಮಾಡಿರುವ ಟಿಟಿಡಿ, ಇಂತಹ ಸುದ್ದಿಗಳನ್ನು ತಿರಸ್ಕರಿಸಬೇಕು ಎಂದು ಹೇಳಿದೆ.

ಆಂಧ್ರ ಪ್ರದೇಶದಲ್ಲಿ ಹೊಸ ಕೊರೋನಾ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಕುಸಿತುವಾಗುತ್ತಿರುವ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹಿರಿಯ ನಾಗರಿಕರಿಗೂ ದರ್ಶನ ಕಲ್ಪಿಸಲಾಗುತ್ತಿದೆ ಎಂಬ ಸುದ್ದಿ ಹರಿದಾಡಿತ್ತು. ಹೀಗಾಗಿ ಈ ಕುರಿತಂತೆ ಟಿಟಿಡಿ ಸ್ಪಷ್ಟನೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com