ದೇಶದಾದ್ಯಂತ 24 ಗಂಟೆಗಳಲ್ಲಿ 38,619 ಕೊರೋನಾ ಕೇಸ್ ಪತ್ತೆ: ಸೋಂಕಿತರ ಸಂಖ್ಯೆ 89 ಲಕ್ಷ

ದೇಶದಲ್ಲಿಂದು 38,617 ಕೊರೋನಾ ಕೇಸ್'ಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 89 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ದೇಶದಲ್ಲಿಂದು 38,617 ಕೊರೋನಾ ಕೇಸ್'ಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 89 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ. 

ದೇಶದಲ್ಲಿ ಇದೀಗ ಒಟ್ಟಾರೆ ಸೋಂಕಿತರ ಸಂಖ್ಯೆ 89,12,908ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ ಮಹಾಮಾಹಿ ಕೊರೋನಾ 474 ಮಂದಿಯನ್ನು ಬಲಿಪಡೆದುಕೊಂಡಿದ್ದು, ಸಾವಿನ ಸಂಖ್ಯೆ 1,30,993ಕ್ಕೆ ತಲುಪಿದೆ. 

ಈ ನಡುವೆ ಒಟ್ಟು 89,12,908 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 44,739 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ದೇಶದಲ್ಲಿ ಈ ವರೆಗೂ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 83,35,110ಕ್ಕೆ ಏರಿಕೆಯಾಗಿದೆತ. ಗುಣಮುಖರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,46,805ಕ್ಕೆ ಇಳಿಕೆಯಾಗಿದೆ.

ಇನ್ನು ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 9,37,279 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 12,74,80,186 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com