ಪ್ರಮಾಣವಚನ ಸ್ವೀಕರಿಸಿದ 3 ದಿನಕ್ಕೆ ಸಿಎಂ ನಿತೀಶ್ ಕುಮಾರ್ ಸರ್ಕಾರದ ಮೊದಲ ವಿಕೆಟ್ ಪತನ!
ನಿತೀಶ್ ಕುಮಾರ್ ನೇತೃತ್ವದ ನೂತನ ಸರ್ಕಾರ ಸಂಪುಟ ರಚನೆಯಾಗಿ ಇನ್ನು ವಾರ ಕಳೆದಿಲ್ಲ. ಅದಾಗಲೇ ಶಿಕ್ಷಣ ಸಚಿವ ಸ್ಥಾನಕ್ಕೆ ಮೇವಾಲಾಲ್ ಚೌಧರಿ ರಾಜೀನಾಮೆ ನೀಡಿದ್ದಾರೆ.
Published: 19th November 2020 04:06 PM | Last Updated: 19th November 2020 04:26 PM | A+A A-

ನಿತೀಶ್ ಕುಮಾರ್-ಮೇವಾಲಾಲ್
ಪಾಟ್ನಾ: ನಿತೀಶ್ ಕುಮಾರ್ ನೇತೃತ್ವದ ನೂತನ ಸರ್ಕಾರ ಸಂಪುಟ ರಚನೆಯಾಗಿ ಇನ್ನು ವಾರ ಕಳೆದಿಲ್ಲ. ಅದಾಗಲೇ ಶಿಕ್ಷಣ ಸಚಿವ ಸ್ಥಾನಕ್ಕೆ ಮೇವಾಲಾಲ್ ಚೌಧರಿ ರಾಜೀನಾಮೆ ನೀಡಿದ್ದಾರೆ.
ತಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದ್ದರಿಂದ ಮೇವಾಲಾಲ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎನ್ನಲಾಗಿದೆ.
ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮದೇ ಸಂಪುಟ ಸಚಿವರ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ಈ ಸಂಬಂಧ ಯಾವ ಕ್ರಮ ಕೈಗೊಳ್ಳುತ್ತಾರೆ ಎಂದು ರಾಷ್ಟ್ರೀಯ ಜನತಾ ದಳ(ಆರ್ ಜೆಡಿ) ಪ್ರಶ್ನಿಸಿತ್ತು.
ಇನ್ನು ಆರ್ ಜೆಡಿ ಆರೋಪದ ಬೆನ್ನಲ್ಲೇ ನಿತೀಶ್ ಕುಮಾರ್ ಅವರು ನವೆಂಬರ್ 16ರಂದು ಶಿಕ್ಷಣ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಮೇವಾಲಾಲ್ ವಿರುದ್ಧ ಇರುವ ಭ್ರಷ್ಟಾಚಾರ ಆರೋಪಗಳ ಬಗ್ಗೆ ಚರ್ಚಿಸಿದ್ದರು.
ಬಿಹಾರದಲ್ಲಿ ಎನ್ ಡಿ ಎ ಮೈತ್ರಿಕೂಟದ ಶಾಸಕಾಂಗ ಪಕ್ಷದ ನಾಯಕನಾಗಿ ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಯ್ಕೆಯಾಗಿದ್ದು ಸೋಮವಾರ ಏಳನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.
ನಿತೀಶ್ ಕುಮಾರ್ ಜೊತೆ ಬಿಜೆಪಿಯ ಕುಮಾರ್ ತಾರ್ ಕಿಶೋರ್ ಪ್ರಸಾದ್ ಮತ್ತು ರೇಣು ದೇವಿ, ಜೆಡಿಯುನ ವಿಜಯ್ ಕುಮಾರ್ ಚೌಧರಿ, ಅಶೋಕ್ ಕುಮಾರ್ ಚೌಧರಿ, ವಿಜೇಂದ್ರ ಪ್ರಸಾದ್ ಯಾದವ್, ಮೇವಾ ಲಾಲ್ ಚೌಧರಿ, ಶೀಲಾ ಮಂಡಲ್ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
#WATCH: Nitish Kumar takes oath as the Chief Minister of Bihar for the seventh time - his fourth consecutive term. pic.twitter.com/5jcZXabSYw
— ANI (@ANI) November 16, 2020