ಕೋವಿಡ್-19: ದೆಹಲಿಯಲ್ಲಿ ತಗ್ಗದ ಕೊರೋನಾ ಅಬ್ಬರ, ಇಂದು ಮತ್ತೆ 7,546 ಹೊಸ ಸೋಂಕು ಪ್ರಕರಣಗಳು ದಾಖಲು

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೆಹಲಿಯಲ್ಲಿ 7,546 ಹೊಸ ಸೋಂಕು ಪ್ರಕರಣ ದಾಖಲಾಗಿವೆ. 
ಕೋವಿಡ್-19
ಕೋವಿಡ್-19

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೆಹಲಿಯಲ್ಲಿ 7,546 ಹೊಸ ಸೋಂಕು ಪ್ರಕರಣ ದಾಖಲಾಗಿವೆ. 

ಹೌದು.. ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 7,546 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ರಾಜಧಾನಿಯಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 5,10,630ಕ್ಕೆ ಏರಿಕೆಯಾಗಿದೆ. ಅಂತೆಯೇ ಇಂದು ಒಂದೇ ದಿನ ದೆಹಲಿಯಲ್ಲಿ 98 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ  ಮೂಲಕ ಕೊರೋನಾ  ಸೋಂಕಿಗೆ ಬಲಿಯಾದವರ ಸಂಖ್ಯೆ 8,041ಕ್ಕೆ ಏರಿಕೆಯಾಗಿದೆ.

ಇಂದು ಒಂದೇ ದಿನ 6,685 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೆಹಲಿಯಲ್ಲಿ ಸೋಂಕಿನಿಂದ ಗುಣಮುಖರಾದ ಸೋಂಕಿತರ ಸಂಖ್ಯೆ 4,59,368ಕ್ಕೆ ಏರಿಕೆಯಾಗಿದೆ. ದೆಹಲಿಯಲ್ಲಿ ಪ್ರಸ್ತುತ ಕೇವಲ 43,221ಕೊರೋನಾ ಸಕ್ರಿಯ ಪ್ರಕರಣಗಳು ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com