ಪಶ್ಚಿಮ ಬಂಗಾಳ: ಮಾಲ್ಡಾದ ಪ್ಲಾಸ್ಟಿಕ್‍ ಕಾರ್ಖಾನೆಯಲ್ಲಿ ಸ್ಫೋಟ, ಐವರು ಸಾವು

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಸುಜಾಪುರದ ಪ್ಲಾಸ್ಟಿಕ್‍ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಐವರು ಸಾವನ್ನಪ್ಪಿದ್ದು, ಅನೇಕರಿಗೆ ಗಾಯಗಳಾಗಿರುವ ಘಟನೆ ಗುರುವಾರ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಾಲ್ಡಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಸುಜಾಪುರದ ಪ್ಲಾಸ್ಟಿಕ್‍ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಐವರು ಸಾವನ್ನಪ್ಪಿದ್ದು, ಅನೇಕರಿಗೆ ಗಾಯಗಳಾಗಿರುವ ಘಟನೆ ಗುರುವಾರ ನಡೆದಿದೆ.

ಘಟನೆ ಬಗ್ಗೆ ವೃತ್ತಿಪರರಿಂದ ನಿಸ್ಪಕ್ಷಪಾತ ತನಿಖೆ ನಡೆಸುವಂತೆ ರಾಜ್ಯಪಾಲ ಜಗದೀಪ್‍ ಧನ್‍ಕರ್ ಅವರು ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರಕ್ಕೆ ಸೂಚಿಸಿದ್ದು, ರಾಜ್ಯದಲ್ಲಿ ಅಕ್ರಮ ಬಾಂಬ್ ತಯಾರಿಕೆ ತಡೆಗೆ ಕ್ರಮ ತೆಗೆದುಕೊಳ್ಳುವಂತೆ ಹೇಳಿದ್ದಾರೆ.

ಪ್ಲಾಸ್ಟಿಕ್ ಕ್ರಷರ್ ಯಂತ್ರದಲ್ಲಿ ಸ್ಫೋಟ ಸಂಭವಿಸಿದ್ದು, ಇದರ ತೀವ್ರತೆ ಎಷ್ಟಿತ್ತೆಂದರೆ ದೇಹಗಳು ಛಿದ್ರ ಛಿದ್ರವಾಗಿವೆ. ಗಾಯಾಳುಗಳನ್ನು ಮಾಲ್ಡಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಮಾಲ್ಡಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. 

ಕಾರ್ಖಾನೆಯೊಳಗಿನ ಭಾರವಾದ ಯಂತ್ರದಲ್ಲಿ ತಾಂತ್ರಿಕ ದೋಷದಿಂದಾಗಿ ಹೆಚ್ಚಿನ ತೀವ್ರತೆಯ ಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ರಾಜೋರಿಯಾ ತಿಳಿಸಿದ್ದಾರೆ.

ರಾಜ್ಯ ನಗರಾಭಿವೃದ್ಧಿ ಸಚಿವ ಫಿರ್ಹಾದ್ ಹಕೀಮ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com