ಏಷ್ಯಾದ ಬಲಿಷ್ಠ ರಾಷ್ಟ್ರಗಳ 'ಆರ್‌ಸಿಇಪಿ' ಒಕ್ಕೂಟದಿಂದ ಭಾರತ ಹೊರಕ್ಕೆ: ಸ್ಪಷ್ಟನೆ ಕೊಟ್ಟ ಜೈಶಂಕರ್‌

ಕೇಂದ್ರ ಸರ್ಕಾರದ ನಿರ್ಧಾರಕ್ಕೆ ದೇಶೀಯ ಮಾರಾಟ ಮತ್ತು ರಾಜತಾಂತ್ರಿಕ ವಲಯಗಳಲ್ಲಿ ತೀವ್ರ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಜೈಶಂಕರ್ ಈ ಹೇಳಿಕೆ ನೀಡಿದ್ದಾರೆ.
ಜೈಶಂಕರ್
ಜೈಶಂಕರ್

ನವದೆಹಲಿ: ಏಷ್ಯಾದ ಮೂರನೇ ಅತಿ ದೊಡ್ಡ ರಾಷ್ಟ್ರವಾಗಿರುವ ಭಾರತದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಹಿನ್ನೆಲೆಯಲ್ಲಿ ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ (ಆರ್‌ಸಿಇಪಿ) ಇಂದ ಹೊಂದಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್‌ ಹೇಳಿದ್ದಾರೆ.

ಸದ್ಯದ ಪರಿಸ್ಥಿತಿಯಲ್ಲಿ ಈ ಒಪ್ಪಂದ ಪ್ರವೇಶಿಸುವುದು ತಕ್ಷಣದ ನಕಾರಾತ್ಮಕ ಪರಿಣಾಮ ಬೀರಲಿದೆ ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು. 

ಕೇಂದ್ರ ಸರ್ಕಾರದ ನಿರ್ಧಾರಕ್ಕೆ ದೇಶೀಯ ಮಾರಾಟ ಮತ್ತು ರಾಜತಾಂತ್ರಿಕ ವಲಯಗಳಲ್ಲಿ ತೀವ್ರ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಜೈಶಂಕರ್ ಈ ಹೇಳಿಕೆ ನೀಡಿದ್ದಾರೆ.

ಈ ಒಪ್ಪಂದ ಸಂಬಂಧ ಹಲವು ಪ್ರಮುಖ ಅಂಶಗಳ ಮೇಲೆ ಗಮನ ಹರಿಸಿಲ್ಲ ಎಂಬುದು ನಮ್ಮ ಗಮನಕ್ಕೆ ಬಂದಿತ್ತು. ಆದ್ದರಿಂದ ಇದಕ್ಕೆ ಸಹಿ ಹಾಕುವ ಮುನ್ನ ಎಲ್ಲಾ ಆಯಾಮದಿಂದ ಚಿಂತನೆ ನಡೆಸಬೇಕಿತ್ತು ಎಂದಿದ್ದಾರೆ.

ಬುಧವಾರ ಯೂರೋಪಿಯನ್‌ ನೀತಿ ಅಧ್ಯಯನ ಕೇಂದ್ರ ಆಯೋಜಿಸಿದ್ದ ವೆಬ್‌ ಚರ್ಚೆಯಲ್ಲಿ ಪಾಲ್ಗೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com