ದೆಹಲಿಯಲ್ಲಿ ಕೊರೋನಾ ನಿಯಂತ್ರಿಸಲು ಮಾಸ್ಕ್ ದಂಡ ನಾಲ್ಕು ಪಟ್ಟು ಹೆಚ್ಚಿಸಿದ ಕೇಜ್ರಿವಾಲ್ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ವೈರಸ್ ಪಾಸಿಟಿವ್ ಪ್ರಕರಣಗಳು ಮತ್ತೆ ಏರಿಕೆಯಾಗುತ್ತಿದ್ದು, ಮಹಾಮಾರಿಯನ್ನು ನಿಯಂತ್ರಿಸಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಾಸ್ಕ್ ದಂಡವನ್ನು 500 ರೂ.ಯಿಂದ 2 ಸಾವಿರ ರೂಪಾಯಿಗೆ ಏರಿಕೆ ಮಾಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ವೈರಸ್ ಪಾಸಿಟಿವ್ ಪ್ರಕರಣಗಳು ಮತ್ತೆ ಏರಿಕೆಯಾಗುತ್ತಿದ್ದು, ಮಹಾಮಾರಿಯನ್ನು ನಿಯಂತ್ರಿಸಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಾಸ್ಕ್ ದಂಡವನ್ನು 500 ರೂ.ಯಿಂದ 2 ಸಾವಿರ ರೂಪಾಯಿಗೆ ಏರಿಕೆ ಮಾಡಿದ್ದಾರೆ.

ಕೊರೋನಾ ಹೆಚ್ಚುತ್ತಿದ್ದರೂ ಮಾಸ್ಕ್ ಧರಿಸದೇ ನಿರ್ಲಕ್ಷ್ಯ ತೋರುತ್ತಿದ್ದವರಿಗೆ ಇನ್ನುಮುಂದೆ 2 ಸಾವಿರ ದಂಡ ವಿಧಿಸುವ ಮೂಲಕ ಬಿಸಿ ಮುಟ್ಟಿಸಲು ದೆಹಲಿ ಸರ್ಕಾರ ನಿರ್ಧರಿಸಿದೆ.

ಇದೇ ವೇಳೆ ನಗರದ ಕೊಳಗಳು ಮತ್ತು ಇತರ ಜಲಮೂಲಗಳಲ್ಲಿ ಛಾತ್ ಆಚರಿಸಬೇಡಿ ಎಂದು ದೆಹಲಿ ಸಿಎಂ ಕೇಜ್ರಿವಾಲ್ ಅವರು ಜನರಿಗೆ ಮನವಿ ಮಾಡಿದ್ದಾರೆ.

ಕೋವಿಡ್-19 ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಶೇ. 80 ರಷ್ಟು ಐಸಿಯು ಹಾಸಿಗೆಗಳನ್ನು ಕಾಯ್ದಿರಿಸುವ ನಿರ್ಧಾರವನ್ನು ದೆಹಲಿ ಸರ್ಕಾರ ನವೆಂಬರ್ 19 ರಿಂದ ಜಾರಿಗೊಳಿಸುತ್ತಿದೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com