ದಿವಂಗತ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜಯಂತಿ: ಪ್ರಧಾನಿ ಮೋದಿ ಸೇರಿದಂತೆ ಗಣ್ಯರು, ನಾಯಕರಿಂದ ಸ್ಮರಣೆ 

ಭಾರತದ ಪ್ರಪ್ರಥಮ ಮಹಿಳಾ ಪ್ರಧಾನಿ, ಉಕ್ಕಿನ ಮಹಿಳೆ ಎಂದು ಖ್ಯಾತಿ ಗಳಿಸಿರುವ ಇಂದಿರಾ ಗಾಂಧಿಯವರ 103ನೇ ಜಯಂತಿ ಇಂದು. ಈ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ  ಗಣ್ಯರು, ನಾಯಕರು ದಿವಂಗತ ಮಾಜಿ ಪ್ರಧಾನಿಯನ್ನು ಸ್ಮರಿಸಿಕೊಂಡಿದ್ದಾರೆ.
ಇಂದಿರಾ ಗಾಂಧಿಯವರ ಸ್ಮಾರಕಕ್ಕೆ ಭೇಟಿ ನೀಡಿದ ಗೌರವ ಸಲ್ಲಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಇಂದಿರಾ ಗಾಂಧಿಯವರ ಸ್ಮಾರಕಕ್ಕೆ ಭೇಟಿ ನೀಡಿದ ಗೌರವ ಸಲ್ಲಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ನವದೆಹಲಿ: ಭಾರತದ ಪ್ರಪ್ರಥಮ ಮಹಿಳಾ ಪ್ರಧಾನಿ, ಉಕ್ಕಿನ ಮಹಿಳೆ ಎಂದು ಖ್ಯಾತಿ ಗಳಿಸಿರುವ ಇಂದಿರಾ ಗಾಂಧಿಯವರ 103ನೇ ಜಯಂತಿ ಇಂದು. ಈ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ  ಗಣ್ಯರು, ನಾಯಕರು ದಿವಂಗತ ಮಾಜಿ ಪ್ರಧಾನಿಯನ್ನು ಸ್ಮರಿಸಿಕೊಂಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪುತ್ರ ರಾಹುಲ್ ಗಾಂಧಿ ದೆಹಲಿಯ ಶಕ್ತಿಸ್ಥಳದಲ್ಲಿರುವ ಇಂದಿರಾ ಗಾಂಧಿ ಸ್ಮಾರಕಕ್ಕೆ ತೆರಳಿ ಪುಷ್ಪನಮನ ಸಲ್ಲಿಸಿದ್ದಾರೆ. ಕೇಂದ್ರ ಕಾಂಗ್ರೆಸ್ ಮತ್ತು ಕರ್ನಾಟಕ ಕಾಂಗ್ರೆಸ್ ನಾಯಕರು ಇಂದಿರಾ ಗಾಂಧಿಯವರನ್ನು ಸ್ಮರಿಸಿಕೊಂಡಿದ್ದಾರೆ. 

ಇಂದಿರಾ ಗಾಂಧಿಯವರ ಬಲಿಷ್ಠ ನಾಯಕತ್ವ ಇಂದಿಗೆ ಸಹ ಮಾದರಿ ಎಂದಿದ್ದಾರೆ. 1917ರ ನವೆಂಬರ್ 19ರಂದು ಜನಿಸಿದ್ದ ಇಂದಿರಾ ಗಾಂಧಿ ಭಾರತದ ಪ್ರಧಾನ ಮಂತ್ರಿಯಾಗಿ 1966ರಿಂದ 1977ರವರೆಗೆ ಮೊದಲ ಬಾರಿ ನಂತರ 1980ರಿಂದ ಅವರ ಹತ್ಯೆಯಾಗುವವರೆಗೆ 1984ರವರೆಗೆ ಸೇವೆ ಸಲ್ಲಿಸಿದ್ದರು.

ನಾಯಕತ್ವ, ದೂರದೃಷ್ಟಿ, ನಿಜವಾದ ನಾಯಕತ್ವ ಮತ್ತು ನಮ್ಮ ತಾಯಿನಾಡಿನ ಮಗಳಾದ ಇಂದಿರಾ ಗಾಂಧಿ ನಮ್ಮ ದೇಶದ ನಾಗರಿಕರಿಗೆ ಪ್ರಧಾನ ಮಂತ್ರಿಗಿಂತ ಹೆಚ್ಚಿನವರಾಗಿದ್ದರು; ಶ್ರೇಷ್ಠತೆ ಮತ್ತು ಸಮೃದ್ಧಿಯ ಅನ್ವೇಷಣೆಯಲ್ಲಿ ಪುನರುಜ್ಜೀವನಗೊಳಿಸುವ ಶಕ್ತಿಯಾಗಿದ್ದರು ಎಂದು ಕಾಂಗ್ರೆಸ್ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com