ಬಂಗಾಳದಲ್ಲಿ 130 ಬಿಜೆಪಿ ಕಾರ್ಯಕರ್ತರ ಹತ್ಯೆ: ಮಮತಾ ಬ್ಯಾನರ್ಜಿ ವಿರುದ್ಧ ಬಬುಲ್ ಸುಪ್ರಿಯೋ ತಿರುಗೇಟು

2021 ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 200 ಸೀಟುಗಳನ್ನು ಗೆಲ್ಲಲಿದೆ ಎಂದು ಕೇಂದ್ರ ಸಚಿವ ಬಬುಲ್ ಸುಪ್ರಿಯೋ ಹೇಳಿದ್ದಾರೆ.
ಬಬುಲ್ ಸುಪ್ರಿಯೋ ಮತ್ತು ಮಮತಾ ಬ್ಯಾನರ್ಜಿ
ಬಬುಲ್ ಸುಪ್ರಿಯೋ ಮತ್ತು ಮಮತಾ ಬ್ಯಾನರ್ಜಿ

ನವದೆಹಲಿ: 2021 ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 200 ಸೀಟುಗಳನ್ನು ಗೆಲ್ಲಲಿದೆ ಎಂದು ಕೇಂದ್ರ ಸಚಿವ ಬಬುಲ್ ಸುಪ್ರಿಯೋ ಹೇಳಿದ್ದಾರೆ.

ಬಂಗಾಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಮಮತಾ ದೀದಿ ಅಧಿಕಾರದಲ್ಲಿದ್ದು, ಆಡಳಿತಂತ್ರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ, ಬಂಗಾಳದ ಜನ ನಮ್ಮೊಂದಿಗಿದ್ದಾರೆ, ಹೀಗಾಗಿ ಮುಂದಿನ ಚುನಾವಣೆಯಲ್ಲಿ 200 ಸೀಟುಗಳನ್ನು ಗೆಲ್ಲಲಿದ್ದೇವೆ ಎಂದು ಹೇಳಿದ್ದಾರೆ.

ಮಮತಾ ಬ್ಯಾನರ್ಜಿಗೆ ಸಂವಿಧಾನದ ಮೇಲೆ ನಂಬಿಕೆಯಿಲ್ಲ, ರಾಜ್ಯದಲ್ಲಿ ಹಿಂಸಾಚಾರ ಅಧಿಕವಾಗಿದ್ದು,  130 ಬಿಜೆಪಿ ಕಾರ್ಯಕರ್ತರನ್ನು ಕೊಲ್ಲಲಾಗಿದೆ ಎಂದು ಆರೋಪಿಸಿದ್ದಾರೆ.

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನಾಚರಣೆಯಾದ ಜನವರಿ 23 ಅನ್ನು ರಾಷ್ಟ್ರೀಯ ರಜಾದಿನವೆಂದು ನಿರ್ಧರಿಸಿ, ರಾಷ್ಟ್ರೀಯ ರಜಾದಿನಗಳಂತೆ ಘೋಷಿಸಲಾಗುವುದು ಎಂದು ಸುಪ್ರಿಯೋ ಹೇಳಿದರು.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಆಯುಷ್ಮಾನ್ ಭಾರತ್, ಪಿಎಂ-ಕಿಸಾನ್ ಸೇರಿದಂತೆ ಕೇಂದ್ರ ಯೋಜನೆಗಳನ್ನು ರಾಜ್ಯದಲ್ಲಿ ನಿರ್ಬಂಧಿಸಿದ್ದಾರೆ ಎಂದು ಕೇಂದ್ರ ಸಚಿವರು ಆರೋಪಿಸಿದ್ದು, ಪಶ್ಚಿಮ ಬಂಗಾಳದಲ್ಲೂ ಇದೇ ರೀತಿಯ ಅಭಿವೃದ್ಧಿಯನ್ನು ಬಿಜೆಪಿ ಬಯಸುತ್ತದೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com