ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚಳ: ಅಹಮದಾಬಾದ್‌ನಲ್ಲಿ ರಾತ್ರಿ 9 ರಿಂದ ಬೆಳಗ್ಗೆ 6ರ ವರೆಗೆ ಕರ್ಫ್ಯೂ

ಗುಜರಾತ್ ನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಪರಿಣಾಮ ರಾಜಧಾನಿ ಅಹ್ಮದಾಬಾದ್ ನಲ್ಲಿ ಇಂದಿನಿಂದಲೇ ರಾತ್ರಿ 9ರಿಂದ ಬೆಳಗ್ಗೆ 6ರ ವರೆಗೆ ಕರ್ಫ್ಯೂ ಹೇರಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಅಹಮದಾಬಾದ್‌: ಗುಜರಾತ್ ನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಪರಿಣಾಮ ರಾಜಧಾನಿ ಅಹ್ಮದಾಬಾದ್ ನಲ್ಲಿ ಇಂದಿನಿಂದಲೇ ರಾತ್ರಿ 9ರಿಂದ ಬೆಳಗ್ಗೆ 6ರ ವರೆಗೆ ಕರ್ಫ್ಯೂ ಹೇರಲಾಗಿದೆ.

ಕೋವಿಡ್‌–19 ಸೋಂಕು ಪ್ರಕರಣಗಳು ಏರಿಕೆಯಾಗುತ್ತಿರುವುದರಿಂದ ನಗರದಲ್ಲಿ ರಾತ್ರಿ 9ರಿಂದ ಬೆಳಗ್ಗೆ 6ರ ವರೆಗೆ ನಗರದಲ್ಲಿ ಕರ್ಫ್ಯೂ ಜಾರಿಗೊಳಿಸಲು ಅಹಮದಾಬಾದ್‌ ಮಹಾನಗರ ಪಾಲಿಕೆ ನಿರ್ಧರಿಸಿದ್ದು. ಇಂದಿನಿಂದಲೇ ಈ ಕ್ರಮ ಜಾರಿಯಾಗಲಿದೆ ಎಂದು ತಿಳಿದುಬಂದಿದೆ.

ಗುಜರಾತ್ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿ ಪ್ರಕಾರ ರಾಜಧಾನಿ ಅಹಮದಾಬಾದ್‌ನಲ್ಲಿ ಸುಮಾರು 45 ಸಾವಿರಕ್ಕೂ ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದರಲ್ಲಿ 2 ಸಾವಿರಕ್ಕಿಂತ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಗುಜರಾತ್‌ನಲ್ಲಿ ಇದುವರೆಗೆ ಒಟ್ಟು 69,78,249 ಜನರಿಗೆ  ಕೋವಿಡ್‌–19 ಸೋಂಕು ಪರೀಕ್ಷೆ ನಡೆಸಲಾಗಿದ್ದು, ಇನ್ನೂ 12,457 ಪ್ರಕರಣಗಳು ಸಕ್ರಿಯವಾಗಿವೆ.

ಹಬ್ಬಗಳ ಸಂದರ್ಭದಲ್ಲಿ ಜನಸಂದಣಿ ಹೆಚ್ಚಾಗಿದ್ದು, ಸೋಂಕು ಪ್ರಕರಣಗಳ ಹಠಾತ್ ಏರಿಕೆಗೆ ಕಾರಣ ಎಂದು ಪಾಲಿಕೆ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದು, ಮಾಸ್ಕ್‌ ಬಳಸದಿರುವುದು, ಸಾಮಾಜಿಕ ಅಂತರ ನಿಯಮವನ್ನು ಪಾಲಿಸದಿರುವುದು ಪ್ರಕರಣಗಳ ಏರಿಕೆಗೆ ಕಾರಣ ಎಂದು ಹೆಚ್ಚುವರಿ ಮುಖ್ಯಕಾರ್ಯದರ್ಶಿ (ಅರಣ್ಯ  ಮತ್ತು ಪರಿಸರ ಇಲಾಖೆ) ಡಾ.ರಾಜೀವ್‌ ಕುಮಾರ್‌ ಗುಪ್ತಾ ಹೇಳಿದ್ದಾರೆ ಎನ್ನಲಾಗಿದೆ.

ಇನ್ನು ಗುಜರಾತ್ ನಲ್ಲಿ ಇಂದು 1281 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ಅಂತೆಯೇ 8 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಇಂದು 1274 ಸೋಂಕಿತರು ಗುಣಮುಖರಾಗಿದ್ದಾರೆ. ಪ್ರಸ್ತುತ ಗುಜರಾತ್ ನಲ್ಲಿ 12457ಸಕ್ರಿಯ ಪ್ರಕರಣಗಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com