ಸಿಬಿಐ ತನಿಖೆಗೆ ರಾಜ್ಯ ಸರ್ಕಾರದ ಅನುಮತಿ ಕಡ್ಡಾಯ: ಸುಪ್ರೀಂ ಕೋರ್ಟ್ 

ಕೇಂದ್ರೀಯ ತನಿಖಾ ದಳ ಸಿಬಿಐ ತನಿಖೆಗೆ ರಾಜ್ಯಸರ್ಕಾರದ ಪೂರ್ವನುಮತಿ ಕಡ್ಡಾಯವೆಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ಪ್ರಕಟಿಸಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಕೇಂದ್ರೀಯ ತನಿಖಾ ದಳ ಸಿಬಿಐ ತನಿಖೆಗೆ ರಾಜ್ಯಸರ್ಕಾರದ ಪೂರ್ವನುಮತಿ ಕಡ್ಡಾಯವೆಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ಪ್ರಕಟಿಸಿದೆ. 

 ರಾಜ್ಯಗಳ ಅನುಮತಿಯಿಲ್ಲದೆ ಕೇಂದ್ರ ಸರ್ಕಾರ ಯಾವುದೇ ರಾಜ್ಯಕ್ಕೆ ಏಜೆನ್ಸಿಯ ಅಧಿಕಾರ ವ್ಯಾಪ್ತಿಯನ್ನು ವಿಸ್ತರಿಸಲು ಸಾಧ್ಯವಿಲ್ಲ ಎಂದು ಉನ್ನತ ನ್ಯಾಯಾಲಯ ಹೇಳಿದೆ.

ಉತ್ತರಪ್ರದೇಶದಲ್ಲಿನ ಭ್ರಷ್ಟಾಚಾರ ಪ್ರಕರಣದ ಆರೋಪಿಗಳ ಅರ್ಜಿಗಳನ್ನು ನಿರ್ಧರಿಸುವಾಗ, ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್ ನೇತೃತ್ವದ ನ್ಯಾಯಪೀಠ ಈ ಆದೇಶ ಪ್ರಕಟಿಸಿದ್ದು, ರಾಜ್ಯಗಳ ಅನುಮತಿಯಿಲ್ಲದೆ ತನಿಖೆ ನಡೆಸಲು ಸಾಧ್ಯವಿಲ್ಲ ಎಂದು ಹೇಳಿತು.

ಈ ನಿಬಂಧನೆಗಳು ಸಂವಿಧಾನದ ಸಂಯುಕ್ತ ಸ್ವರೂಪಕ್ಕೆ ಅನುಗುಣವಾಗಿದ್ದು,  ಅದು ಅದರ ಮೂಲ ರಚನೆಗಳಲ್ಲಿ ಒಂದಾಗಿದೆ ಎಂದು ನ್ಯಾಯಪೀಠ ಹೇಳಿದೆ. 

ಇತ್ತೀಚಿಗೆ ಪಂಜಾಬ್, ಪಶ್ಚಿಮ ಬಂಗಾಳ, ರಾಜಸ್ಥಾನ, ಮಹಾರಾಷ್ಟ್ರ, ಜಾರ್ಖಂಡ್ ಮತ್ತು ಛತ್ತೀಸ್ ಗಢ ಸರ್ಕಾರಗಳು ತಮ್ಮ ರಾಜ್ಯಗಳಲ್ಲಿನ ಸಿಬಿಐ ತನಿಖೆಗಳಿಗೆ ತಮ್ಮ ಸಾಮಾನ್ಯ ಒಪ್ಪಿಗೆಯನ್ನು ಹಿಂತೆಗೆದುಕೊಂಡಿದ್ದರಿಂದ ಅಪೆಕ್ಸ್ ಕೋರ್ಟಿ ತೀರ್ಪು ಮಹತ್ವ ಪಡೆದುಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com