ಎಲ್ಎಸ್ಆರ್ ವಿದ್ಯಾರ್ಥಿನಿ ಆತ್ಮಹತ್ಯೆ: ಶುಲ್ಕ ರಿಯಾಯಿತಿ, ಲ್ಯಾಪ್‌ಟಾಪ್‌ ನೀಡುವುದಾಗಿ ಘೋಷಿಸಿದ ಕಾಲೇಜ್

ಹಣಕಾಸಿನ ತೊಂದರೆಯಿಂದಾಗಿ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ನಂತರ ಎಚ್ಚೆತ್ತುಕೊಂಡ ಲೇಡಿ ಶ್ರೀ ರಾಮ್ ಕಾಲೇಜ್(ಎಲ್ಎಸ್ಆರ್) ಕೆಲವು ಕೋರ್ಸ್‌ಗಳಿಗೆ ಶುಲ್ಕವನ್ನು ಕಡಿತಗೊಳಿಸುವುದಾಗಿ ಘೋಷಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಹಣಕಾಸಿನ ತೊಂದರೆಯಿಂದಾಗಿ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ನಂತರ ಎಚ್ಚೆತ್ತುಕೊಂಡ ಲೇಡಿ ಶ್ರೀ ರಾಮ್ ಕಾಲೇಜ್(ಎಲ್ಎಸ್ಆರ್) ಕೆಲವು ಕೋರ್ಸ್‌ಗಳಿಗೆ ಶುಲ್ಕವನ್ನು ಕಡಿತಗೊಳಿಸುವುದಾಗಿ ಘೋಷಿಸಿದೆ. ಅಲ್ಲದೆ ಅಗತ್ಯ ಇರುವವರಿಗೆ ಲ್ಯಾಪ್‌ಟಾಪ್‌ಗಳನ್ನು ಒದಗಿಸಲು ಸಮಿತಿ ರಚಿಸಿದೆ ಮತ್ತು ಕೆಲವು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ಗಳಲ್ಲಿ ವಾಸಿಸಲು ಅವಕಾಶ ಮಾಡಿಕೊಟ್ಟಿದೆ.

"ಕೊರೋನಾ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಕ್ಯಾಂಪಸ್‌ನಿಂದ ಹೊರಗುಳಿಯುವುದರಿಂದ ಕಾಲೇಜಿನ ಕೆಲವು ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ ಎಂಬ ಅಂಶವನ್ನು ಗಮನಿಸಿದರೆ, ಕಾಲೇಜ್ ಈ ವರ್ಷ ಅಂತಹ ಕೆಲವು ಸೌಲಭ್ಯಗಳ ಶುಲ್ಕವನ್ನು ತೆಗೆದುಹಾಕಿದೆ. ಇದು ಶುಲ್ಕವನ್ನು ಗಣನೀಯವಾಗಿ ಕಡಿಮೆ ಮಾಡಲು ಕಾರಣವಾಗಿದೆ ಮತ್ತು ಶುಲ್ಕವನ್ನು ಕಂತುಗಳಲ್ಲಿ ಪಾವತಿಸಲು ಅವಕಾಶವಿದೆ" ಕಾಲೇಜ್ ಆಡಳಿತ ಮಂಡಳಿ ತನ್ನ ಆದೇಶದಲ್ಲಿ ತಿಳಿಸಿದೆ.

"ಕೋವಿಡ್ ಸಾಂಕ್ರಾಮಿಕ ಸಂದರ್ಭವನ್ನು ಗಮನದಲ್ಲಿಟ್ಟುಕೊಂಡು, ಹೊಸ ಅರ್ಜಿಯ ಮೇಲೆ ಮತ್ತು ಅಗತ್ಯದ ಆಧಾರದ ಮೇಲೆ ಪ್ರಸ್ತುತ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಮತ್ತು ಮೂರನೇ ವರ್ಷದ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ನಲ್ಲಿ ಉಳಿಯಲು ಅನುಮತಿಸಲಾಗುವುದು" ಎಂದು ಕಾಲೇಜು ಅಧಿಕೃತ ಆದೇಶದಲ್ಲಿ ತಿಳಿಸಿದೆ.

ಎಲ್‌ಎಸ್‌ಆರ್ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿನಿ, ಐಎಎಸ್ ಆಕಾಂಕ್ಷಿಯಾಗಿದ್ದ ಐಶ್ವರ್ಯಾ ನವೆಂಬರ್‌ 2ರಂದು ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾದ್‌ನಗರ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ನಂತರ ವಿದ್ಯಾರ್ಥಿ ಸಂಘಟನೆಗಳು ಕಾಲೇಜ್ ಶುಲ್ಕ ಕಡಿತಗೊಳಿಸಬೇಕು ಎಂದು ಒತ್ತಾಯಿಸಿದ ನಂತರ ಕಾಲೇಜು ಆಡಳಿತ ಮಂಡಳಿ ಈ ನಿರ್ಧಾರಕ್ಕೆ ಬಂದಿದೆ.

ನನ್ನ ಶೈಕ್ಷಣಿಕ ಖರ್ಚಿನಿಂದಾಗಿ ನಾನು ಹೆತ್ತವರಿಗೆ ಹೊರೆಯಾಗಲು ಬಯಸುವುದಿಲ್ಲ ಎಂದು 19 ವರ್ಷದ ಐಶ್ವರ್ಯಾ ಡೆತ್ ನೋಟ್ ಬರೆದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com