ಕೊರೋನಾ ಲಸಿಕೆ ಹಂಚಿಕೆ ಕಾರ್ಯತಂತ್ರ ಪರಿಶೀಲಿಸಿದ ಪ್ರಧಾನಿ ಮೋದಿ

ಮುಂಬರುವ ಜನವರಿ ತಿಂಗಳಿನಲ್ಲಿ ದೇಶದಾದ್ಯಂತ ಕೊರೋನಾ ನಿಯಂತ್ರಿಸಲು ಲಸಿಕೆ ಆರಂಭಿಸಲಾಗುತ್ತದೆ ಎಂಬ ಸುಳಿವನ್ನು ಲಸಿಕೆ ತಯಾರಿಕೆ ಕಂಪನಿಗಳು ನೀಡಿರುವ ಬೆನ್ನಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಲಸಿಕೆ ಹಂಚಿಕೆ ಕಾರ್ಯತಂತ್ರದ ಬಗ್ಗೆ ಪರಿಶೀಲನಾ ಸಭೆ ನಡೆಸಿದರು. 

Published: 21st November 2020 07:16 AM  |   Last Updated: 21st November 2020 07:16 AM   |  A+A-


PM Modi reviews India's COVID vaccination progress with officials through video conferencing

ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸುತ್ತಿರುವ ಪ್ರಧಾನಿ ಮೋದಿ

Posted By : Manjula VN
Source : The New Indian Express

ನವದೆಹಲಿ: ಮುಂಬರುವ ಜನವರಿ ತಿಂಗಳಿನಲ್ಲಿ ದೇಶದಾದ್ಯಂತ ಕೊರೋನಾ ನಿಯಂತ್ರಿಸಲು ಲಸಿಕೆ ಆರಂಭಿಸಲಾಗುತ್ತದೆ ಎಂಬ ಸುಳಿವನ್ನು ಲಸಿಕೆ ತಯಾರಿಕೆ ಕಂಪನಿಗಳು ನೀಡಿರುವ ಬೆನ್ನಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಲಸಿಕೆ ಹಂಚಿಕೆ ಕಾರ್ಯತಂತ್ರದ ಬಗ್ಗೆ ಪರಿಶೀಲನಾ ಸಭೆ ನಡೆಸಿದರು. 

ಸಭೆಯಲ್ಲಿ ಕೊರೋನಾ ಸೋಂಕಿತರಿಗೆ ಯಾವ ಮಾನದಂಡದ ಮೇಲೆ ಲಸಿಕೆ ನೀಡಬೇಕು. ಯಾವೆಲ್ಲಾ ನಾಗರೀಕರಿಗೆ ಆದ್ಯತೆಯ ಮೇರೆಗೆ ಲಸಿಕೆ ನೀಡಬೇಕು. ಅಲ್ಲದೆ, ಅಭಿವೃದ್ಧಿ, ನಿಯಂತ್ರಣ ಮತ್ತು ಅನುಮೋದನೆ ಹಾಗೂ ಸಂಗ್ರಹಣೆಯ ಪ್ರಕ್ರಿಯೆಗಳ ಬಗ್ಗೆ ನಡೆಲಾಗಿದೆ ಎಂದು ತಿಳಿದುಬಂದಿದೆ. 

ವಿಶ್ವದಲ್ಲೇ ಅತಿದೊಡ್ಡ ಪ್ರಮಾಣದಲ್ಲಿ ಲಸಿಕೆ ತಯಾರಿಕೆ ಸಾಮರ್ಥ್ಯಯುಳ್ಳ ಕಂಪನಿ ಎನಿಸಿರುವ ಸೆರಮ್‌ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ (ಎಸ್‌ಐಐ) ಮುಖ್ಯಸ್ಥ ಅದಾರ್‌ ಪೂನಾವಾಲ ಕೆಲ ದಿನಗಳ ಹಿಂದಷ್ಟೇ ಹೇಳಿಕೆ ನೀಡಿದ್ದರು.

ಆಕ್ಸ್‌ಫರ್ಡ್‌‌ ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸಿರುವ ಕೊರೊನಾ ತಡೆ ಲಸಿಕೆಯ ಕೋಟ್ಯಂತರ ಡೋಸ್‌ಗಳನ್ನು ಈಗಾಗಲೇ ಉತ್ಪಾದನೆ ಮಾಡಿದೆ ಎಂದು ಹೇಳಿದ್ದರು. ಜೊತೆಗೆ ಚಿಲ್ಲರೆ ಮಾರುಕಟ್ಟೆಯಲ್ಲಿ ಈ ಲಸಿಕೆಯ ಬೆಲೆ ರೂ.500-600 ಇದ್ದು, ಕೇಂದ್ರ ಸರಕಾರಕ್ಕೆ ಇನ್ನೂ ಕಡಿಮೆ ಬೆಲೆಯಲ್ಲಿ ಲಸಿಕೆ ಪೂರೈಕೆ ಮಾಡುವ ಇಂಗಿತವನ್ನು ವ್ಯಕ್ತಪಡಿಸಿದ್ದರು. 

Stay up to date on all the latest ರಾಷ್ಟ್ರೀಯ news
Poll
RBI

ಕಾರ್ಪೊರೇಟ್‌ ಕಂಪನಿಗಳಿಗೆ ಬ್ಯಾಂಕ್‌ ಆರಂಭಿಸಲು ಅನುಮತಿಸುವಂತೆ ಕೇಂದ್ರ ಸರ್ಕಾರಕ್ಕೆ ಆರ್ ಬಿಐ ನೀಡಿರುವ ಸಲಹೆಯನ್ನು ಸ್ವಾಗತಿಸುತ್ತೀರಾ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp