ತಮಿಳುನಾಡು: ವೈದ್ಯಕೀಯ ಪ್ರವೇಶ ಪಡೆದ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ವೆಚ್ಚವನ್ನು ಸರ್ಕಾರವೇ ಭರಿಸಲಿದೆ

ಖಾಸಗಿ ವೈದ್ಯಕೀಯ ಕಾಲೇಜ್ ಗಳಲ್ಲಿ ಶೇ. 7.5 ಮೀಸಲಾತಿ ಅಡಿಯಲ್ಲಿ ವೈದ್ಯಕೀಯ ಪ್ರವೇಶ ಪಡೆದ ಎಲ್ಲಾ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಶುಲ್ಕ, ಹಾಸ್ಟೆಲ್ ಶುಲ್ಕ, ಇತ್ಯಾದಿಗಳನ್ನು ರಾಜ್ಯ ಸರ್ಕಾರವೇ ಪಾವತಿಸಲಿದೆ ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಶನಿವಾರ ಘೋಷಿಸಿದ್ದಾರೆ.
ಸಿಎಂ ಪಳನಿಸ್ವಾಮಿ
ಸಿಎಂ ಪಳನಿಸ್ವಾಮಿ

ಚೆನ್ನೈ: ಖಾಸಗಿ ವೈದ್ಯಕೀಯ ಕಾಲೇಜ್ ಗಳಲ್ಲಿ ಶೇ. 7.5 ಮೀಸಲಾತಿ ಅಡಿಯಲ್ಲಿ ವೈದ್ಯಕೀಯ ಪ್ರವೇಶ ಪಡೆದ ಎಲ್ಲಾ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಶುಲ್ಕ, ಹಾಸ್ಟೆಲ್ ಶುಲ್ಕ, ಇತ್ಯಾದಿಗಳನ್ನು ರಾಜ್ಯ ಸರ್ಕಾರವೇ ಪಾವತಿಸಲಿದೆ ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಶನಿವಾರ ಘೋಷಿಸಿದ್ದಾರೆ.

ಇನ್ನು ಮುಂದೆ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಾವತಿಗಾಗಿ ಕಾಯಬೇಕಿಲ್ಲ. ಸರ್ಕಾರ ಎಲ್ಲಾ ಶೈಕ್ಷಣಿಕ ವೆಚ್ಚವನ್ನು ಭರಿಸಲಿದೆ. ತಮಿಳುನಾಡು ವೈದ್ಯಕೀಯ ಸೇವೆಗಳ ನಿಗಮ ಲಿಮಿಟೆಡ್‌ನೊಂದಿಗೆ ಆವರ್ತಕ ಸಾಲನಿಧಿ ಫಂಡ್ ರಚಿಸುವ ಮೂಲಕ ಶುಲ್ಕವನ್ನು ಪಾವತಿಸಲಾಗುವುದು ಎಂದು ಪಳನಿಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

"ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳು ಶುಲ್ಕವನ್ನು ಪಾವತಿಸುವಾಗ ಎದುರಿಸುವ ಕಷ್ಟಗಳನ್ನು ತಪ್ಪಿಸುವ ಉದ್ದೇಶದಿಂದ ನಾನು ಮೇಲಿನ ಘೋಷಣೆ ಮಾಡಿದ್ದೇನೆ. ಈ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸಂಪೂರ್ಣ ನೆರವು ಸಿಗುತ್ತದೆ. ಆದರೆ ಶೈಕ್ಷಣಿಕ ವೆಚ್ಚವನ್ನು ಭರಿಸುವುದಾಗಿ ಡಿಎಂಕೆ ಹೇಳಿರುವುದು ಕೇವಲ ನಾಟಕ. ಜನರಿಗೆ ಇದು ಚೆನ್ನಾಗಿ ತಿಳಿದಿದೆ ಎಂದು ಪಳನಿಸ್ವಾಮಿ ಹೇಳಿದ್ದಾರೆ.

ಇದಕ್ಕು ಮುನ್ನ, ಶೇ. 7.5 ಮೀಸಲಾತಿ ಅಡಿಯಲ್ಲಿ ಈ ವರ್ಷ ನೀಟ್ ಪಾಸ್ ಮಾಡಿ ಖಾಸಗಿ ಕಾಲೇಜುಗಳಲ್ಲಿ ವೈದ್ಯಕೀಯ ಕೋರ್ಸ್ ಪ್ರವೇಶ ಪಡೆದ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ವೆಚ್ಚವನ್ನು ನಮ್ಮ ಪಕ್ಷವೇ ಭರಿಸಲಿದೆ ಎಂದು ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಘೋಷಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com