ಜಮ್ಮು-ಕಾಶ್ಮೀರ: ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಉಗ್ರರ ಬಂಧನ

ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಲ್ಲಿ ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಶನಿವಾರ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಲ್ಲಿ ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಶನಿವಾರ ತಿಳಿದುಬಂದಿದೆ. 

ಅನುಮಾನಾಸ್ಪದವಾಗಿ ಓಡಾಟಗಳು ಕಂಡು ಬಂದ ಹಿನ್ನೆಲೆಯಲ್ಲಿ ಅವಂತಿಪೋರಾದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭದ್ರತಾಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು. ಈ ವೇಳೆ ಇಬ್ಬರು ಉಗ್ರರನ್ನು ಬಂಧನಕ್ಕೊಳಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಕಳೆದ ಗುರುವಾರವಷ್ಟೇ ಈ ತಿಂಗಳಾಂತ್ಯಕ್ಕೆ ನಡೆಯಲಿರುವ ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆ ವೇಳೆ ಭಾರೀ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ನಾಲ್ವರು ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಭಯೋತ್ಪಾದಕರನ್ನು ಸಿಆರ್'ಪಿಎಫ್ ಯೋಧರು ಎನ್ಕೌಂಟರ್ ನಲ್ಲಿ ಹತ್ಯೆ ಮಾಡಿದ್ದರು. 

ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಜಮ್ಮು ನಗರದ ಹೊರವಲಯದ ಟೋಲ್ ಪ್ಲಾಜಾ ಬಳಿ ಪಾಕಿಸ್ತಾನದಿಂದ ಒಳನುಸುಳಿ ಬಂದಿದ್ದ ಉಗ್ರರು ಹಾಗೂ ಭದ್ರತಾಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿತ್ತು. ಈ ವೇಳೆ ನಾಲ್ವರು ಉಗ್ರರನ್ನು ಭದ್ರತಾಪಡೆಗಳು ಹತ್ಯೆ ಮಾಡಿತ್ತು. ಘಟನೆಯಲ್ಲಿ ಇಬ್ಬರು ಪೊಲೀಸರು ಕೂಡ ಗಂಭೀರವಾಗಿ ಗಾಯಗೊಂಡಿದ್ದರು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com