ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 46,232 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 90.50 ಲಕ್ಷ

ಅತೀ ಹೆಚ್ಚು ಕೊರೋನಾ ಸೋಂಕಿತರ ಪಟ್ಟಿಯಲ್ಲಿ ಅಮೆರಿಕಾದ ನಂತರ ಸ್ಧಾನ ಪಡೆದುಕೊಂಡಿರುವ ಭಾರತದಲ್ಲಿ ಶನಿವಾರ 46,232 ಮಂದಿಗೆ ಸೋಂಕು ದೃಢಪಟ್ಟಿದ್ದು. ಇದರೊಂದಿಗೆ ದೇಶದಲ್ಲಿ ಸೋಂಕಿತರ ಒಟ್ಟಾರೆ ಸಂಖ್ಯೆ 90,50,598ಕ್ಕೆ ಏರಿಕೆಯಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಅತೀ ಹೆಚ್ಚು ಕೊರೋನಾ ಸೋಂಕಿತರ ಪಟ್ಟಿಯಲ್ಲಿ ಅಮೆರಿಕಾದ ನಂತರ ಸ್ಧಾನ ಪಡೆದುಕೊಂಡಿರುವ ಭಾರತದಲ್ಲಿ ಶನಿವಾರ 46,232 ಮಂದಿಗೆ ಸೋಂಕು ದೃಢಪಟ್ಟಿದ್ದು. ಇದರೊಂದಿಗೆ ದೇಶದಲ್ಲಿ ಸೋಂಕಿತರ ಒಟ್ಟಾರೆ ಸಂಖ್ಯೆ 90,50,598ಕ್ಕೆ ಏರಿಕೆಯಾಗಿದೆ. 

ಮತ್ತೊಂದೆಡೆ 24 ಗಂಟೆಗಳಲ್ಲಿ 564 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,32,726ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಈ ನಡುವೆ ನಿನ್ನೆ ಒಂದೇ ದಿನ 49,715 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಇದರೊಂದಿಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 84,78,124ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,39,747 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com