ಉತ್ತರ ಪ್ರದೇಶದ ಉನ್ನಾವೊದಲ್ಲಿ ಮಗುಚಿಬಿದ್ದ ಬಸ್ಸು: 20 ಪ್ರಯಾಣಿಕರಿಗೆ ಗಾಯ 

ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸು ಮಗುಚಿಬಿದ್ದ ಪರಿಣಾಮ ಸುಮಾರು 20 ಮಂದಿ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಉನ್ನಾವೊದಲ್ಲಿ ಕಳೆದ ರಾತ್ರಿ ನಡೆದಿದೆ.
ಬಸ್ಸು ಅಪಘಾತದ ಮತ್ತು ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಿದ ಚಿತ್ರಗಳು
ಬಸ್ಸು ಅಪಘಾತದ ಮತ್ತು ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಿದ ಚಿತ್ರಗಳು

ಉನ್ನಾವೊ(ಉತ್ತರ ಪ್ರದೇಶ):ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸು ಮಗುಚಿಬಿದ್ದ ಪರಿಣಾಮ ಸುಮಾರು 20 ಮಂದಿ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಉನ್ನಾವೊದಲ್ಲಿ ಕಳೆದ ರಾತ್ರಿ ನಡೆದಿದೆ.

ದೆಹಲಿಯಿಂದ ಬಹ್ರೈಚ್ ಕಡೆಗೆ ಬರುತ್ತಿದ್ದ ಬಸ್ಸಿನಲ್ಲಿ ಸುಮಾರು 82 ಪ್ರಯಾಣಿಕರಿದ್ದರು. ಉನ್ನಾವೊದ ಸಿರ್ದಾರ್ಪುರ ಬಳಿ ಮಗುಚಿಬಿದ್ದು ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದ್ದು ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com