ತರುಣ್ ಗಗೋಯ್
ತರುಣ್ ಗಗೋಯ್

ತರುಣ್ ಗೊಗೊಯ್ ಆರೋಗ್ಯ ಚಿಂತಾಜನಕ: ಪ್ರಜ್ಞಾ ಹೀನಾ ಸ್ಥಿತಿಯಲ್ಲಿ ಅಸ್ಸಾಂ ಮಾಜಿ ಸಿಎಂ

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್  ಉಸಿರಾಟದ ತೊಂದರೆಯಿಂದ  ಪ್ರಜ್ಞಾಹೀನರಾಗಿದ್ದಾರೆ ಎಂದು ಅಸ್ಸಾಂ ಆರೋಗ್ಯ ಸಚಿವ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ಗುವಾಹಟಿ: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್  ಉಸಿರಾಟದ ತೊಂದರೆಯಿಂದ  ಪ್ರಜ್ಞಾಹೀನರಾಗಿದ್ದಾರೆ ಎಂದು ಅಸ್ಸಾಂ ಆರೋಗ್ಯ ಸಚಿವ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ಕೊರೋನಾ ಸೋಂಕಿಗೆ ತುತ್ತಾಗಿದ್ದ ಅವರು ಕೆಲವು ದಿನಗಳ ಹಿಂದಷ್ಟೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ನವೆಂಬರ್‌ 2ರಂದು ಅವರ ಆರೋಗ್ಯಸ್ಥಿತಿ ಹದಗೆಟ್ಟಿದ್ದರಿಂದ ಗುವಾಹಟಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. 

ತುರ್ತು ನಿಗಾ ಘಟಕದಲ್ಲಿ ವೆಂಟಿಲೇಟರ್‌ ನೆರವಿನಿಂದ ಚಿಕಿತ್ಸೆ ನೀಡಲಾಗುತ್ತಿದ್ದು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ಆರೋಗ್ಯ ಅಧೀಕ್ಷಕ ಅಭಿಜಿತ್‌ ಶರ್ಮ ತಿಳಿಸಿದ್ದಾರೆ. ಬಹು ಅಂಗಾಗಳು ವೈಫಲ್ಯಗೊಂಡಿದ್ದು ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com