ಭಾರತೀಯ ಸೇನೆಯ ಜಂಟಿ ಕಾರ್ಯಾಚರಣೆ: ಓರ್ವ ಉಗ್ರ, ಆತನ ಸಹಚನ ಬಂಧನ

ಭಾರತೀಯ ಸೇನೆ ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಮತ್ತು ಆತನಿಗೆ ಸಹಾಯ ಮಾಡುತ್ತಿದ್ದ ಓರ್ವ ಸ್ಥಳೀಯ ವ್ಯಕ್ತಿಯನ್ನು ಬಂಧಿಸಲಾಗಿದೆ.

Published: 22nd November 2020 12:28 PM  |   Last Updated: 22nd November 2020 12:28 PM   |  A+A-


Indian Army

ಭಾರತೀಯ ಸೇನೆ

Posted By : Srinivasamurthy VN
Source : ANI

ಶ್ರೀನಗರ: ಭಾರತೀಯ ಸೇನೆ ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಮತ್ತು ಆತನಿಗೆ ಸಹಾಯ ಮಾಡುತ್ತಿದ್ದ ಓರ್ವ ಸ್ಥಳೀಯ ವ್ಯಕ್ತಿಯನ್ನು ಬಂಧಿಸಲಾಗಿದೆ.

ಪುಲ್ವಾಮಾದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಹಂದ್ವಾರದ ಮದ್ರಸಾದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ಉಗ್ರ ಚಟುವಟಿಕೆಯಲ್ಲಿ ತೊಡಗಿರುವ ಕುರಿತು ಅಧಿಕಾರಿಗಳಿಗೆ ಮಾಹಿತಿ ಲಭ್ಯವಾಗಿತ್ತು, ಈ ಸಂಬಂಧ ಕೂಡಲೇ ಕಾರ್ಯಾಚರಣೆ ನಡೆಸಿದ ಸೇನೆ ಮತ್ತು ಪೊಲೀಸರು  ಹಂದ್ವಾರಾ ಮದರಸಾದಲ್ಲಿ ಓರ್ವ ಉಗ್ರನನ್ನು ನಿನ್ನೆ ಬಂಧಿಸಿದ್ದರು. ಇಂದು ಆತ ನೀಡಿದ ಮಾಹಿತಿ ಮೇರಗೆ ಆತನಿಗೆ ನೆರವು ನೀಡುತ್ತಿದ್ದ ಆರೋಪದ ಮೇರೆಗೆ ಮತ್ತೋರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಸೇನೆ ಹೇಳಿದೆ.

ಇತ್ತೀಚೆಗಷ್ಟೇ ಸೇನೆ ನಗ್ರೋಟಾದಲ್ಲಿ ಕಾರ್ಯಾಚರಣೆ ನಡೆಸಿ ನಾಲ್ಕು ಮಂದಿ ಉಗ್ರರನ್ನು ಸೆದೆ ಬಡಿದಿತ್ತು. ಈ ವೇಳೆ ದೊರೆತ ಮಹತ್ವದ ಸಾಕ್ಷ್ಯಾಧಾರಗಳನ್ನು ಆಧಾರಿಸಿ ನಿನೆ ಕಾರ್ಯಾಚರಣೆ ನಡೆಸಿದ್ದ ಸೇನೆ ಓರ್ವ ಉಗ್ರನನ್ನು ಬಂಧಿಸಿತ್ತು. ಇದೀಗ ಆತ ನೀಡಿದ ಮಾಹಿತಿ ಮೇರೆಗೆ  ಮತ್ತೋರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ.

Stay up to date on all the latest ರಾಷ್ಟ್ರೀಯ news
Poll
Covid-_Vaccine1

ರಾಜಕಾರಣಿಗಳಿಗೆ ಮೊದಲು ಕೋವಿಡ್-19 ಲಸಿಕೆ ನೀಡಬೇಕೇ?


Result
ಇಲ್ಲ, ಸಾಮಾನ್ಯ ಜನರಿಗೆ ಮೊದಲು
ಹೌದು, ಅವರು ನಮ್ಮ ನಾಯಕರು
flipboard facebook twitter whatsapp