ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ತೇಜಸ್ವಿ ಯಾದವ್ ವಿಪಕ್ಷ ನಾಯಕನಾಗಲು ಸಾಧ್ಯವಿಲ್ಲ: ಜೆಡಿಯು

ಹಲವು ಭ್ರಷ್ಟಾಚಾರ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದ ಕಾರಣ ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ವಿಪಕ್ಷ ನಾಯಕನಾಗಲು ಸಾಧ್ಯವಿಲ್ಲ ಎಂದು ಜೆಡಿಯು ಹೇಳಿದೆ
ತೇಜಸ್ವಿ ಯಾದವ್
ತೇಜಸ್ವಿ ಯಾದವ್

ಪಾಟ್ನಾ: ಹಲವು ಭ್ರಷ್ಟಾಚಾರ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದ ಕಾರಣ ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ವಿಪಕ್ಷ ನಾಯಕನಾಗಲು ಸಾಧ್ಯವಿಲ್ಲ ಎಂದು ಜೆಡಿಯು ಹೇಳಿದೆ.

ಭ್ರಷ್ಟಾತಾರ ಆರೋಪದ ಹಿನ್ನೆಲೆಯಲ್ಲಿ ಬಿಹಾರ ಸಚಿವ ಮೆವಾ ಲಾಲ್ ಚೌಧರಿ ಸಚಿವ ಸಂಪುಟ ರಾಜಿನಾಮೆ ನೀಡಿದ ಹಿನ್ನೆಲೆಯಲ್ಲಿ ಜೆಡಿಯು ಈ ಪ್ರತಿಕ್ರಿಯೆ ನೀಡಿದೆ.

ಈ ಸಂಬಂಧ ಜಂಟಿ ಸುದ್ದಿಗೋಷ್ಠಿ ನಡೆಸಿದ ಜೆಡಿಯು ಅಧ್ಯಕ್ಷ ವಶಿಷ್ಟ ನಾರಾಯಣ ಸಿಂಗ್ ಮತ್ತು ಅಶೋಕ್ ಚೌಧರಿ, ತೇಜಸ್ವಿ ಯಾದವ್ ವಿರುದ್ಧ ಹರಿಹಾಯ್ದಿದ್ದಾರೆ.

ಭ್ರಷ್ಟಾಚಾರ ಆರೋಪ ಹೊತ್ತಿರುವವರನ್ನು ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ತೇಜಸ್ವಿ ಯಾದವ್ ಆರೋಪಗಳ ಸುರಿಮಳೆ ಸುರಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com