ಕೊರೋನಾ ನೆಗಟಿವ್ ವರದಿ ಇದ್ದರೆ ಮಾತ್ರ ದೆಹಲಿ, ರಾಜಸ್ಥಾನ, ಗುಜರಾತ್, ಗೋವಾ ಪ್ರಯಾಣಿಕರಿಗೆ ಮಹಾರಾಷ್ಟ್ರ ಪ್ರವೇಶಕ್ಕೆ ಅನುಮತಿ

ದೆಹಲಿ, ರಾಜಸ್ಥಾನ, ಗುಜರಾತ್ ಮತ್ತು ಗೋವಾದ ರಾಜ್ಯಗಳಿಂದ ಬರುವ ಪ್ರಯಾಣಿಕರು ಕೋವಿಡ್ -19 ರೋಗಲಕ್ಷಣಗಳನ್ನು ಹೊಂದಿದ್ದರೆ ಅವರನ್ನು ಹಿಂತಿರುಗಿಸಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮುಂಬೈ: ದೆಹಲಿ, ರಾಜಸ್ಥಾನ, ಗುಜರಾತ್ ಮತ್ತು ಗೋವಾದ ರಾಜ್ಯಗಳಿಂದ ಬರುವ ಪ್ರಯಾಣಿಕರು ಕೋವಿಡ್ -19 ರೋಗಲಕ್ಷಣಗಳನ್ನು ಹೊಂದಿದ್ದರೆ ಅವರನ್ನು ಹಿಂತಿರುಗಿಸಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

ಈ ನಾಲ್ಕು ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ಯಾವುದೇ ಕೊರೋನಾ ಲಕ್ಷಣಗಳಿಲ್ಲದಿದ್ದರೆ ಮಾತ್ರ ರಾಜ್ಯ ಪ್ರವೇಶಿಸಲು ಅನುಮತಿಸಲಾಗುವುದು. ಎಂದು ಮಹಾರಾಷ್ಟ್ರ ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.

ದೆಹಲಿ, ರಾಜಸ್ಥಾನ, ಗುಜರಾತ್ ಮತ್ತು ಗೋವಾ ವಿಮಾನ ನಿಲ್ದಾಣಗಳಿಂದ ಬರುವ ಪ್ರಯಾಣಿಕರು ಕಡ್ಡಾಯವಾಗಿ ಕೊರೋನಾ ನೆಗಟಿವ್ ವರದಿ ಹೊಂದಿರಬೇಕು. ಆ ವರದಿಯನ್ನು ಮಹಾರಾಷ್ಟ್ರದ ವಿಮಾನ ನಿಲ್ದಾಣಗಳಿಗೆ ಆಗಮಿಸಿದ ನಂತ ಅಧಿಕಾರಿಗಳಿಗೆ ತೋರಿಸಬೇಕು ಎಂದು ಹೇಳಿದೆ.

ಪ್ರಯಾಣಿಕರು ಮಹಾರಾಷ್ಟ್ರದ ವಿಮಾನ ನಿಲ್ದಾಣಕ್ಕೆ ಬಂದು ಇಳಿಯುವ 72 ಗಂಟೆಗಳ ಮುನ್ನ ಕೊರೋನಾ ಪರೀಕ್ಷೆಗೆ ಒಳಗಾಗಿರಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com