
ರಘು ಶರ್ಮಾ
ಜೈಪುರ: ರಾಜಸ್ಥಾನ ಆರೋಗ್ಯ ಸಚಿವ ರಘು ಶರ್ಮಾ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಸೋಮವಾರ ತಿಳಿದುಬಂದಿದೆ.
ಈ ಕುರಿತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದು, ರಘು ಶರ್ಮಾ ಅವರಿಗೆ ಕೊರೋನಾ ತಗುಲಿರುವ ವಿಚಾರವನ್ನು ತಿಳಿಸಿದ್ದಾರೆ.
ಸಂಪುಟದ ಸಚಿವರಾಗಿರುವ ಡಾ.ರಘು ಶರ್ಮಾ ಅವರಿಗೆ ಕೊರೋನಾ ಸೋಂಕು ತಗುಲಿದ್ದು, ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.
ಈ ನಡುವೆ ರಘು ಶರ್ಮಾ ಅವರೂ ಕೂಡ ಟ್ವೀಟ್ ಮಾಡಿ, ತಮಗೆ ಕೊರೋನಾ ಸೋಂಕು ತಗುಲಿದ್ದು, ತಮ್ಮೊಂದಿಗೆ ಸಂಪರ್ಕದಲ್ಲಿದ್ಜ ಜನರು ಪರೀಕ್ಷೆಗೊಳಗಾಗುವಂತೆ ಮನವಿ ಮಾಡಿಕೊಂಡಿದ್ದಾರೆ.
ಆರಂಭದಲ್ಲಿ ಕೊರೋನಾ ಸೋಂಕಿನ ಲಕ್ಷಣಗಳು ಕಂಡು ಬಂದಿತ್ತು. ಬಳಿಕ ಪರೀಕ್ಷೆಗೊಳಗಾಗಿದ್ದು, ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ನನ್ನೊಂದಿಗೆ ಸಂಪರ್ಕದಲ್ಲಿದ್ದವರು ಕೂಡಲೇ ಕ್ವಾರೈಂಟೈನ್'ಗೊಳಗಾಗಿ ಪರೀಕ್ಷೆಗೊಳಗಾಗಿ ಎಂದು ಶರ್ಮಾ ಅವರು ಮನವಿ ಮಾಡಿಕೊಂಡಿದ್ದಾರೆ.