ಕೋವಿಡ್-19: ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಎಲ್ಲಾ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ತಾಕೀತು
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಪರಿಸ್ಥಿತಿ ಬಿಗಡಾಯಿಸುತ್ತಿರುವ ಹಿನ್ನೆಲೆಯಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಎಲ್ಲಾ ರಾಜ್ಯ ಸರ್ಕಾರಗಳು ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಆದೇಶಿಸಿದೆ.
Published: 23rd November 2020 12:56 PM | Last Updated: 23rd November 2020 01:06 PM | A+A A-

ಸಂಗ್ರಹ ಚಿತ್ರ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಪರಿಸ್ಥಿತಿ ಬಿಗಡಾಯಿಸುತ್ತಿರುವ ಹಿನ್ನೆಲೆಯಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಎಲ್ಲಾ ರಾಜ್ಯ ಸರ್ಕಾರಗಳು ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಆದೇಶಿಸಿದೆ.
ದೆಹಲಿ ಹಾಗೂ ಗುಜರಾತ್ ರಾಜ್ಯಗಳಲ್ಲಿ ಕೊರೋನಾ ಪರಿಸ್ಥಿತ ತೀವ್ರವಾಗಿ ಹದಗೆಡುತ್ತಿದ್ದು, ಎಲ್ಲಾ ರಾಜ್ಯಗಳು ಸದ್ಯದ ಪರಿಸ್ಥಿತಿ, ನಿರ್ವಹಣೆ ಹಾಗೂ ಸೋಂಕು ನಿಯಂತ್ರಿಸಲು ಕೈಗೊಂಡಿರುವ ಕ್ರಮಗಳ ಕುರಿತು ಸಮಗ್ರ ವರದಿ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ.
‘ದೆಹಲಿಯಲ್ಲಿ ಮುಖ್ಯವಾಗಿ ನವೆಂಬರ್ ತಿಂಗಳಲ್ಲಿ ಸ್ಥಿತಿ ಹದಗೆಟ್ಟಿದೆ’ ಎಂದು ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠ ದೆಹಲಿ ಸರ್ಕಾರ ಪ್ರತಿನಿಧಿಸಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಸಂಜಯ್ ಜೈನ್ ಅವರಿಗ ತಿಳಿಸಿತು.
ಕೋವಿಡ್ ಪರಿಸ್ಥಿತಿಯನ್ನು ನಿಯಂತ್ರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕ ಹಾಗೂ ಸೋಂಕು ಹೆಚ್ಚಳವಾಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು ಎಂದು ಸೂಚಿಸಿತು.
ನ್ಯಾಯಮೂರ್ತಿಗಳಾದ ಆರ್.ಎಸ್.ರೆಡ್ಡಿ ಮತ್ತು ಎಂ.ಆರ್.ಶಾ ಅವರೂ ಪೀಠದಲ್ಲಿ ಇದ್ದರು. ವಿಡ್ ಪೀಡಿತರಿಗೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ ಹಾಗೂ ಸೋಂಕಿನಿಂದ ಮೃತಪಟ್ಟವರಿಗೆ ಗೌರವಯುತ ಅಂತ್ಯಕ್ರಿಯೆ ಆಗುತ್ತಿಲ್ಲ ಎಂಬುದನ್ನು ಗಣನೆಗೆ ತೆಗೆದುಕೊಂಡ ನ್ಯಾಯಪೀಠ ವಿಚಾರಣೆಯನ್ನು ನವೆಂಬರ್ 27ಕ್ಕೆ ಮುಂದೂಡಿತು.