ಕೋವಿಡ್ ಪರಿಸ್ಥಿತಿಯನ್ನು ಸೂಕ್ತವಾಗಿ ನಿರ್ವಹಿಸಲಾಗುತ್ತಿದೆ, ಮೊದಲು ಜಿಎಸ್ ಟಿ ಬಾಕಿ ಕೊಡಿ: ಮೋದಿಗೆ ಮಮತಾ

ದೇಶದ ಕೆಲವು ರಾಜ್ಯಗಳಲ್ಲಿ ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಎಂಟು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.
ಪ್ರಧಾನಿ ಮೋದಿ, ಮಮತಾ ಬ್ಯಾನರ್ಜಿ
ಪ್ರಧಾನಿ ಮೋದಿ, ಮಮತಾ ಬ್ಯಾನರ್ಜಿ

ನವದೆಹಲಿ: ದೇಶದ ಕೆಲವು ರಾಜ್ಯಗಳಲ್ಲಿ ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಎಂಟು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.

ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಭಾಗವಹಿಸಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಕೋವಿಡ್ ಪರಿಸ್ಥಿತಿಯನ್ನು ಸೂಕ್ತವಾಗಿ ನಿರ್ವಹಿಸಲಾಗುತ್ತಿದೆ ಮತ್ತು ರಾಜ್ಯದಲ್ಲಿ ಕೊರೋನಾ ನಿಯಂತ್ರಣದಲ್ಲಿದೆ ಎಂದು ಹೇಳಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ ಕೋವಿಡ್ -19 ರೋಗಿಗಳ ಚೇತರಿಕೆ ಪ್ರಮಾಣ ಕುರಿತು ಮತ್ತು ಹೊಸ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕ್ಷೀಣಿಸುತ್ತಿರುವ ಬಗ್ಗೆ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ಮಾಹಿತಿ ಮಾಹಿತಿ ನೀಡಿದರು ಎಂದು ಅವರು ತಿಳಿಸಿದರು.

ಇದೇ ವೇಳೆ, ಕೇಂದ್ರ ಸರ್ಕಾರ ಹಲವು ರಾಜ್ಯಗಳಿಗೆ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಬಾಕಿ ಪಾವತಿಸದಿರುವ ಬಗ್ಗೆ ಪ್ರಧಾನಿ ಮೋದಿಗೆ ಮಮತಾ ಬ್ಯಾನರ್ಜಿ ನೆನಪಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com