‘ನಿವಾರ್’ ಚಂಡಮಾರುತ: ತಮಿಳುನಾಡಿನಲ್ಲಿ ನಾಳೆ ಸರ್ಕಾರಿ ರಜೆ, ಚೆನ್ನೈನ ಮೂರು ಬಂದರುಗಳು ಬಂದ್

ಭೀಕರ ‘ನಿವಾರ್’ ಚಂಡಮಾರುತ ಬುಧವಾರ ಸಂಜೆ ಕರಾವಳಿಯನ್ನು ಅಪ್ಪಳಿಸುವ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚೆನ್ನೈ: ಭೀಕರ ‘ನಿವಾರ್’ ಚಂಡಮಾರುತ ಬುಧವಾರ ಸಂಜೆ ಕರಾವಳಿಯನ್ನು ಅಪ್ಪಳಿಸುವ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಿಸಿದೆ.

ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದಲ್ಲಿ ಚಂಡಮಾರುತ ಸನ್ನದ್ಧತೆಯನ್ನು ಪರಿಶೀಲಿಸಿದ ನಂತರ ಮುಖ್ಯಮಂತ್ರಿ ಕೆ ಪಳನಿಸ್ವಾಮಿ, ನಾಳೆ ರಾಜ್ಯದಲ್ಲಿ ಎಲ್ಲ ಸರ್ಕಾರಿ ಕಚೇರಿಗಳಿಗೆ ರಜೆ  ರಜೆ ನೀಡಲಾಗಿದೆ. ಪರಿಸ್ಥಿತಿಯನ್ನು ಅವಲೋಕಿಸಿ ರಜೆಯನ್ನು ಮುಂದುವರೆಸುವ ಕುರಿತು ನಾಳೆ ನಿರ್ಧರಿಸಲಾಗುವುದು ಎಂದರು.

ಅಗತ್ಯ ಸೇವೆಗಳನ್ನು ಒದಗಿಸುವ ಪೊಲೀಸ್, ಅಗ್ನಿಶಾಮಕ ಸೇವೆ ಮತ್ತು ವಿದ್ಯುತ್ ಇಲಾಖೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಸಿಎಂ ತಿಳಿಸಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ ಚೆನ್ನೈ ಮತ್ತು ಸುತ್ತಮುತ್ತಲಿನ ಎಲ್ಲಾ ಮೂರು ಪ್ರಮುಖ ಬಂದರುಗಳನ್ನು ಬಂದ್ ಮಾಡಲಾಗಿದ್ದು, ವಿಮಾನ ನಿಲ್ದಾಣದಲ್ಲೂ ಹೈಅಲರ್ಟ್ ಘೋಷಿಸಲಾಗಿದೆ.

ನಿವಾರ್ ಸಂಕಷ್ಟ ನಿವಾರಣೆಗಾಗಿ ಪ್ರಧಾನಿ ನರೇಂದ್ರ ಮೋದಿಯವರು ತಮಿಳುನಾಡು ಮತ್ತು ಪುದುಚೇರಿ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿದ್ದು, ಸಂಪೂರ್ಣ ಸಹಾಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ನಿವಾರ್ ಚಂಡಮಾರುತವು ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗುತ್ತಿದ್ದು, ಪರಿಣಾಮ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶದ ಅನೇಕ ಕಡೆ ಭಾರಿ ಮಳೆ ಯಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com