ಕೋವಿಡ್-19: ದೆಹಲಿಯಲ್ಲಿ ಹೊಸ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ, 24 ಗಂಟೆಗಳಲ್ಲಿ 4,454 ಪ್ರಕರಣ ದಾಖಲು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಮವಾರ ಕೊರೋನಾ ಅಬ್ಬರ ಕೊಂಚ ತಗ್ಗಿದ್ದು, 24 ಗಂಟೆಗಳಲ್ಲಿ 4,454 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.
ಕೊರೋನಾ ವೈರಸ್
ಕೊರೋನಾ ವೈರಸ್

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಮವಾರ ಕೊರೋನಾ ಅಬ್ಬರ ಕೊಂಚ ತಗ್ಗಿದ್ದು, 24 ಗಂಟೆಗಳಲ್ಲಿ 4,454 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ಹೌದು.. ಕಳೆದ 24 ಗಂಟೆಗಳ ಅವಧಿಯಲ್ಲಿ ದೆಹಲಿಯಲ್ಲಿ 4,454 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ದೆಹಲಿಯಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 5,34,317ಕ್ಕೆ ಏರಿಕೆಯಾಗಿದೆ. ಅಂತೆಯೇ ಸೋಮವಾರ 121 ಮಂದಿ ಸೋಂಕಿತರು ಸಾವನ್ನಪ್ಪಿದ್ದು. ಆ ಮೂಲಕ ದೆಹಲಿಯಲ್ಲಿ ಕೊರೋನಾ  ಸೋಂಕಿಗೆ ಬಲಿಯಾದವರ ಸಂಖ್ಯೆ 8,512ಕ್ಕೆ ಏರಿಕೆಯಾಗಿದೆ.

ಇನ್ನು ಸೋಮವಾರ ದೆಹಲಿಯಲ್ಲಿ 7,216 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೆಹಲಿಯಲ್ಲಿ ಈ ವರೆಗೂ 4,88,476 ಮಂದಿ ಗುಣಮುಖರಾಗಿದ್ದಾರೆ. ದೆಹಲಿಯಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 37,329ಕ್ಕೆ ಕುಸಿದಿದೆ ಎಂದು ದೆಹಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com