ತೆಲಂಗಾಣ: ಮಾಟ ಮಂತ್ರ ಶಂಕೆ, ಸಂಬಂಧಿಯಿಂದ ಟೆಕ್ಕಿಯ ಸಜೀವ ದಹನ
ತೆಲಂಗಾಣದ ಜಗ್ತಿಯಲ್ ಜಿಲ್ಲೆಯಲ್ಲಿ 38 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಒಬ್ಬನನ್ನು ಮಾಟ ಮಂತ್ರ ಮಾಡಿದ್ದಾನೆ ಎಂಬ ಅನುಮಾನದ ಮೇಲೆ ಆತನ ಸಂಬಂಧಿಯೇ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
Published: 24th November 2020 06:31 PM | Last Updated: 24th November 2020 06:31 PM | A+A A-

ಸಾಂದರ್ಭಿಕ ಚಿತ್ರ
ಹೈದರಾಬಾದ್: ತೆಲಂಗಾಣದ ಜಗ್ತಿಯಲ್ ಜಿಲ್ಲೆಯಲ್ಲಿ 38 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಒಬ್ಬನನ್ನು ಮಾಟ ಮಂತ್ರ ಮಾಡಿದ್ದಾನೆ ಎಂಬ ಅನುಮಾನದ ಮೇಲೆ ಆತನ ಸಂಬಂಧಿಯೇ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಟೆಕ್ಕಿ ಸೋಮವಾರ ಸಂಜೆ ಮಲಯಾಳ ಮಂಡಲದಲ್ಲಿರುವ ತಮ್ಮ ಸಂಬಂಧಿಯನ್ನು ಭೇಟಿ ಮಾಡಲು ಹೋಗಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ ವ್ಯಕ್ತಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ. ಆದರೆ, ಕೊಲೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಟೆಕ್ಕಿಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.