ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಪ್ರಧಾನಿ, ಅಮಿತ್ ಶಾ, ನಡ್ಡಾರಿಂದ ಪ್ರಚಾರ ಸಾಧ್ಯತೆ

ಡಿಸೆಂಬರ್ 1 ರಂದು ನಡೆಯಲಿರುವ ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ(ಜಿಎಚ್‌ಎಂಸಿ) ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇತರ ಕೆಲವು ಹಿರಿಯ ಬಿಜೆಪಿ ನಾಯಕರು ಪ್ರಚಾರ ನಡೆಸುವ ಸಾಧ್ಯತೆ ಇದೆ.
ಮೋದಿ-ಅಮಿತ್ ಶಾ
ಮೋದಿ-ಅಮಿತ್ ಶಾ

ನವದೆಹಲಿ: ಡಿಸೆಂಬರ್ 1 ರಂದು ನಡೆಯಲಿರುವ ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ(ಜಿಎಚ್‌ಎಂಸಿ) ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇತರ ಕೆಲವು ಹಿರಿಯ ಬಿಜೆಪಿ ನಾಯಕರು ಪ್ರಚಾರ ನಡೆಸುವ ಸಾಧ್ಯತೆ ಇದೆ.

"ಜಿಎಚ್‌ಎಂಸಿ ಚುನಾವಣೆಗೆ ಕೇಂದ್ರ ಬಿಜೆಪಿ ನಾಯಕರ ಅಭಿಯಾನ ದೃಢಪಟ್ಟಿದೆ, ಅದರ ವೇಳಾಪಟ್ಟಿ ಇನ್ನೂ ಅಂತಿಮಗೊಂಡಿಲ್ಲ ಎಂದು ಪಕ್ಷದ ಮೂಲಗಳು ಬುಧವಾರ ನೀಡಿರುವ ಹೇಳಿಕೆಯಲ್ಲಿ ತಿಳಿಸಿವೆ.

ಮೂಲಗಳ ಪ್ರಕಾರ ಮೋದಿ ಮತ್ತು ಅಮಿತ್ ಶಾ ಅವರಲ್ಲದೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಹೈದರಾಬಾದ್‌ಗೆ ಆಗಮಿಸುವ ನಿರೀಕ್ಷೆಯಿದೆ.

"ಬಿಜೆಪಿಯು ಜಿಎಚ್‌ಎಂಸಿ ಚುನಾವಣೆಯನ್ನು 2023ರ ತೆಲಂಗಾಣ ವಿಧಾನಸಭಾ ಚುನಾವಣೆಗೆ ಮುಂಚಿನ ನಿರ್ಣಾಯಕ ಚುನಾವಣಾ ಸಮರವೆಂದು ಪರಿಗಣಿಸಿದೆ. ಹೀಗಾಗಿ ಪ್ರಚಾರಕ್ಕಾಗಿ ಉನ್ನತ ನಾಯಕರನ್ನು ಕಳುಹಿಸುತ್ತಿದೆ" ಎಂದು ಕೆಲವು ರಾಜಕೀಯ ವೀಕ್ಷಕರು ಹೇಳಿದ್ದಾರೆ.

"ಜಿಎಚ್‌ಎಂಸಿ ಚುನಾವಣೆಗಳು, ವಿಧಾನಸಭಾ ಚುನಾವಣೆಗೆ ಮುನ್ನ" ಸೆಮಿಫೈನಲ್ "ಆಗಿದ್ದು, ಇದರಲ್ಲಿ ಟಿಆರ್‌ಎಸ್ ಬೆಂಬಲವನ್ನು ತ್ಯಜಿಸಲು ಬಿಜೆಪಿ ಬಯಸಿದೆ" ಎಂದು ವೀಕ್ಷಕರು ಅಭಿಪ್ರಾಯಪಟ್ಟಿದ್ದಾರೆ. 

ಮಂಗಳವಾರ ನಡೆಯಲಿರುವ ಚುನಾವಣೆಯ ಫಲಿತಾಂಶ ಡಿಸೆಂಬರ್ 4 ರಂದು ಪ್ರಕಟವಾಗಲಿದೆ. ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆ ಮತ್ತು 2024ರ ಲೋಕಸಭಾ ಚುನಾವಣೆಗಳೆರಡನ್ನೂ ಗಮನದಲ್ಲಿರಿಸಿಕೊಂಡು ಬಿಜೆಪಿ ಮುಖಂಡರ ಪ್ರಚಾರ ಮಾಡಲಿದ್ದಾರೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com