ದೇಶದಲ್ಲಿಂದು 44,376 ಕೊರೋನಾ ಕೇಸ್ ಪತ್ತೆ: ಸೋಂಕಿತರ ಸಂಖ್ಯೆ 92 ಲಕ್ಷ

ದೇಶದಲ್ಲಿಂದು 44,376 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 92 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ದೇಶದಲ್ಲಿಂದು 44,376 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 92 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ. 

ಇನ್ನು ನಿನ್ನೆ ಒಂದೇ ದಿನ 481 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 1,34,699ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ. 

ದೇಶದಲ್ಲಿ ಪತ್ತೆಯಾಗಿರುವ ಒಟ್ಟಾರೆ 92,22,217 ಮಂದಿ ಸೋಂಕಿರ ಪೈಕಿ ನಿನ್ನೆ 37,816 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಗುಣಮುಖರಾದವರ ಸಂಖ್ಯೆ 86,42,771ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 4,44,746 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಇನ್ನು ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 10,75,326 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 13,17,33,134 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com