ದಿಶಾ ಸಾಲಿಯನ್‌ ಸಾವಿನ ಪ್ರಕರಣ: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್

ನಟ ಸುಶಾಂತ್‌ ಸಿಂಗ್‌ ರಜಪೂತ್‌ ಅವರ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯನ್‌ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.
ದಿಶಾ ಸಾಲಿಯಾನ್
ದಿಶಾ ಸಾಲಿಯಾನ್

ಮುಂಬೈ: ನಟ ಸುಶಾಂತ್‌ ಸಿಂಗ್‌ ರಜಪೂತ್‌ ಅವರ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯನ್‌ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.

ಸಿಬಿಐ ತನಿಖೆ ಕೋರಿ ದೆಹಲಿ ಮೂಲದ ವಕೀಲ ಪುನೀತ್ ಧಂಡಾ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತಾ ಮತ್ತು ನ್ಯಾಯಮೂರ್ತಿ ಜಿ ಎಸ್ ಕುಲಕರ್ಣಿ ಅವರ ವಿಭಾಗೀಯ ಪೀಠ, ಅರ್ಜಿಯನ್ನು ವಜಾಗೊಳಿಸಿದೆ. ಆದರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವ್ಯಕ್ತಿಯ ಬಳಿ ಮಾಹಿತಿ ಇದ್ದರೆ ಅದನ್ನು ಪೊಲೀಸರಿಗೆ ನೀಡಬಹದು ಎಂದಿದೆ.

"ಸಿಬಿಐ ತನಿಖೆ ಕೇಳಲು ನೀವು ಯಾರು? ದಿಶಾ ಸಾಲಿಯನ್ ಸಾವಿಗೆ ಸಂಬಂಧಿಸಿದಂತೆ ಯಾವುದೇ ಅನುಮಾನ ಇದ್ದರೆ, ಆಕೆಯ ಕುಟುಂಬ ಕಾನೂನಿನ ಪ್ರಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬಹುದು" ಎಂದು ನ್ಯಾಯಾಲಯ ಹೇಳಿದೆ.

ಸಾಲಿಯನ್ ಸಾವಿನ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಬೇಕು ಮತ್ತು ಅದನ್ನು ಹೈಕೋರ್ಟ್ ಮೇಲ್ವಿಚಾರಣೆ ಮಾಡಬೇಕೆಂದು ಕೋರಿ ಧಂಡಾ ಅವರು ಅರ್ಜಿ ಸಲ್ಲಿಸಿದ್ದರು.

ದಿಶಾ ಸಾಲಿಯಾನ್ ಅವರು ಜೂನ್‌ 8ರಂದು ಮುಂಬೈನ ಮಲಾದ್ ಉಪನಗರದ ಅಪಾರ್ಟ್‌ವೊಂದರ 12ನೇ ಮಹಡಿಯಿಂದ ಜಿಗಿದು ಮೃತಪಟ್ಟಿದ್ದರು. ಮುಂಬೈ ಪೊಲೀಸರು ಇದು ಆತ್ಮಹತ್ಯೆ ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com