ದೆಹಲಿ ಪರಿಸರ ಖಾತೆ ಸಚಿವ ಗೋಪಾಲ್ ರಾಯ್'ಗೆ ಕೊರೋನಾ ಪಾಸಿಟಿವ್

ದೆಹಲಿ ಪರಿಸರ ಖಾತೆ ಸಚಿವ ಗೋಪಾಲ್ ರಾಯ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಗುರುವಾರ ತಿಳಿದುಬಂದಿದೆ. 

Published: 26th November 2020 10:50 AM  |   Last Updated: 26th November 2020 10:50 AM   |  A+A-


Gopal Rai

ದೆಹಲಿ ಪರಿಸರ ಖಾತೆ ಸಚಿವ ಗೋಪಾಲ್ ರಾಯ್

Posted By : Manjula VN
Source : The New Indian Express

ನವದೆಹಲಿ; ದೆಹಲಿ ಪರಿಸರ ಖಾತೆ ಸಚಿವ ಗೋಪಾಲ್ ರಾಯ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಗುರುವಾರ ತಿಳಿದುಬಂದಿದೆ. 

ಕೊರೋನಾ ವೈರಸ್ ಅಬ್ಬರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 19 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸರ್ವಪಕ್ಷ ಸಭೆಯನ್ನು ನಡೆಸಿದ್ದರು. ಈ ಸಭೆಯಲ್ಲಿ ಗೋಪಾಲ್ ರಾಯ್ ಅವರು ಪಾಲ್ಗೊಂಡಿರಲಿಲ್ಲ. 

ಕೆಲ ದಿನಗಳ ಹಿಂದಷ್ಟೇ ಜ್ವರ ಹಾಗೂ ಕೊರೋನಾ ಸೋಂಕು ತಗುಲಿದ ಸೋಂಕುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರಾಯ್ ಅವರು ಕೊರೋನಾ ಪರೀಕ್ಷೆಗೊಳಗಾಗಿದ್ದು, ಈ ವೇಳೆ ವೈರಸ್ ತಗುಲಿರುವುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ. 

ತಮಗೆ ಸೋಂಕು ತಗುಲಿರುವುದನ್ನು ಸ್ವತಃ ಗೋಪಾಲ್ ಅವರೇ ತಿಳಿಸಿದ್ದು, ತಮ್ಮೊಂದಿಗೆ ಸಂಪರ್ಕದಲ್ಲಿದ್ದವರು ಪರೀಕ್ಷೆಗೊಳಗಾಗುವಂತೆ ಮನವಿ ಮಾಡಿಕೊಂಡಿದ್ದಾರೆ. 

Stay up to date on all the latest ರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp