'ಒಂದು ರಾಷ್ಟ್ರ, ಒಂದು ಚುನಾವಣೆ' ಕುರಿತ ಚರ್ಚೆ ಅಗತ್ಯ: ಪ್ರಧಾನಿ ಮೋದಿ

ದೇಶದಲ್ಲಿ "ಒಂದು ರಾಷ್ಟ್ರ, ಒಂದು ಚುನಾವಣೆ" ಕುರಿತ ಚರ್ಚೆ ನಡೆಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಕರೆ ನೀಡಿದ್ದಾರೆ.

Published: 26th November 2020 06:24 PM  |   Last Updated: 26th November 2020 06:24 PM   |  A+A-


PM modi

ಪ್ರಧಾನಿ ಮೋದಿ

Posted By : Lingaraj Badiger
Source : UNI

ನವದೆಹಲಿ: ದೇಶದಲ್ಲಿ "ಒಂದು ರಾಷ್ಟ್ರ, ಒಂದು ಚುನಾವಣೆ" ಕುರಿತ ಚರ್ಚೆ ನಡೆಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಕರೆ ನೀಡಿದ್ದಾರೆ.

ವಿಡಿಯೋ ಕಾನ್ಫರೆನ್ಸ್‌ ಮೂಲಕ ಗುಜರಾತ್‌ನ ಕೇವಾಡಿಯಾದಲ್ಲಿ ನಡೆದ 80ನೇ ಅಖಿಲ ಭಾರತ ಅಧಿಕಾರಿಗಳ ಸಮಾವೇಶದ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಲೋಸಭೆ, ವಿಧಾನಸಭಾ ಮತ್ತು ಸ್ಥಳೀಯ ಪಂಚಾಯತಿ ಮಟ್ಟದ ಎಲ್ಲಾ ಚುನಾವಣೆಗಳನ್ನು ಒಟ್ಟಿಗೆ ನಡೆಸುವ ವಿಷಯ ಪ್ರಸ್ತಾಪಿಸಿದರು. ಇದಕ್ಕೆ ಸಾಮಾನ್ಯ ಮತದಾರರ ಪಟ್ಟಿಯನ್ನು ಬಳಸಬಹುದು. ಈ ನಿಟ್ಟಿನಲ್ಲಿ ಡಿಜಿಟಲ್ ಕ್ರಾಂತಿ ಇದಕ್ಕೆ ನೆರವಾಗಲಿದೆ ಎಂದರು.

ಈ ನಿಟ್ಟಿನಲ್ಲಿ ಸಂವಿಧಾನ ದಿನದಂದು ಗಾಂಧಿಜೀ ಮತ್ತು ಸರ್ಧಾರ್‌ ವಲ್ಲಭಬಾಯಿ ಪಟೇಲ್‌ ಅವರನ್ನು ಸ್ಮರಿಸಬೇಕಾಗಿದೆ ಎಂದರು.

'ಪ್ರತಿ ಕೆಲವು ತಿಂಗಳಿಗೆ, ದೇಶದ ಬೇರೆ ಬೇರೆ ಪ್ರದೇಶಗಳಲ್ಲಿ ಚುನಾವಣೆಗಳು ನಡೆಯುತ್ತಲೇ ಇರುತ್ತವೆ. ಇದು ಅಭಿವೃದ್ಧಿಯ ಮೇಲೆ ಪರಿಣಾಮ ಬೀರುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಈ ಸಮಸ್ಯೆ ಬಗ್ಗೆ ಅಧ್ಯಯನ ನಡೆಯಬೇಕಿದೆ. ಇದಕ್ಕೆ ಅಧಿಕಾರಿಗಳು ಮಾರ್ಗದರ್ಶಕರಾಗಬಲ್ಲರು,' ಎಂದು ಪ್ರಧಾನಿ ಹೇಳಿದ್ದಾರೆ.

ದೇಶದಲ್ಲಿ ನಡೆದ ಮೊದಲ ಮೂರು ಚುನಾವಣೆಗಳಲ್ಲಿ(1952, 57 ಮತ್ತು 62) ಲೋಕಸಭೆ ಹಾಗೂ ಎಲ್ಲ ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲಕ್ಕೆ ಮತದಾನ ನಡೆದಿತ್ತು. ಆ ಬಳಿಕ 1968 ಮತ್ತು 1969ರಲ್ಲಿ ಹಲವು ವಿಧಾನಸಭೆಗಳ ಅವಧಿಪೂರ್ವ ವಿಸರ್ಜನೆ ಹಾಗೂ 1970ರಲ್ಲಿ 4ನೇ ಲೋಕಸಭೆಯು ಅವಧಿಪೂರ್ವ ವಿಸರ್ಜನೆಯಿಂದಾಗಿ ಏಕಕಾಲದ ಚುನಾವಣೆ ಪ್ರಕ್ರಿಯೆಗೆ ತೆರೆ ಬಿದ್ದಿತ್ತು.

Stay up to date on all the latest ರಾಷ್ಟ್ರೀಯ news
Poll
Narendra Singh Tomar

ಕೃಷಿ ಕಾನೂನು ಸಂಬಂಧ ರೈತರು ಮತ್ತು ಕೇಂದ್ರದ ನಡುವಣ ಬಿಕ್ಕಟ್ಟಿಗೆ ಹೊರಗಿನ ಶಕ್ತಿಗಳು ಕಾರಣ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಹೇಳಿದ್ದಾರೆ.


Result
ಹೌದು
ಇಲ್ಲ
flipboard facebook twitter whatsapp