ಡಿ.31 ವರೆಗೆ ಅಂತಾರಾಷ್ಟ್ರೀಯ ವಿಮಾನಗಳ ನಿರ್ಬಂಧ ಮುಂದುವರಿಕೆ

ಭಾರತದಿಂದ ಹೊರಹೋಗುವ ಹಾಗೂ ಒಳಬರುವ ಅಂತಾರಾಷ್ಟ್ರೀಯ ವಿಮಾನ ಸೇವೆಗಳನ್ನು ಡಿ.31ವರೆಗೆ ನಿರ್ಬಂಧಿಸಿ ಕೇಂದ್ರ ಸರ್ಕಾರ ನ.26 ರಂದು ಆದೇಶ ಹೊರಡಿಸಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

ನವದೆಹಲಿ: ಭಾರತದಿಂದ ಹೊರಹೋಗುವ ಹಾಗೂ ಒಳಬರುವ ಅಂತಾರಾಷ್ಟ್ರೀಯ ವಿಮಾನ ಸೇವೆಗಳನ್ನು ಡಿ.31ವರೆಗೆ ನಿರ್ಬಂಧಿಸಿ ಕೇಂದ್ರ ಸರ್ಕಾರ ನ.26 ರಂದು ಆದೇಶ ಹೊರಡಿಸಿದೆ.

ವಾಣಿಜ್ಯ ವಿಮಾನಗಳ ಕಾರ್ಯಾಚರಣೆಗೆ ನಿರ್ಬಂಧ ವಿಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆಯಾದರೂ ಡಿಜಿಸಿಎ ಅನುಮೋದಿತ ವಿಮಾಗಳು ಎಲ್ಲಾ ಸರಕು  ವಿಮಾನಳ ಕಾರ್ಯಾಚರಣೆಗಳಿಗೆ ಈ ನಿರ್ಬಂಧ ಅನ್ವಯವಾಗುವುದಿಲ್ಲ.

ಪ್ರಾಧಿಕಾರದ ಅನುಮೋದನೆ ಪಡೆದುಕೊಂಡ ಪೂರ್ವನಿಗದಿತ ವಿಮಾನಗಳ ಕಾರ್ಯಾಚರಣೆಗೆ ಅವಕಾಶವಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಪ್ರಸ್ತುತ ಭಾರತ ಹಲವು ರಾಷ್ಟ್ರಗಳೊಂದಿಗೆ ಏರ್ ಬಬಲ್ ಒಪ್ಪಂದವನ್ನು ಮಾಡಿಕೊಂಡಿದ್ದು, ಇದರ ಪ್ರಕಾರ ಉಭಯ ದೇಶಗಳ ನಾಗರಿಗರು ವಿಮಾನದಲ್ಲಿ ಪರಸ್ಪರ ಎರಡೂ ಪ್ರದೇಶಗಳಿಗೆ ಸಂಚರಿಸಬಹುದಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಮಾ.25 ರಂದು ಎಲ್ಲಾ ಪ್ರಯಾಣೀಕ ವಿಮಾನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಮೇ.25 ರಂದು ದೇಶೀಯ ವಿಮಾನಗಳ ಸಂಚಾರವನ್ನು ಪುನಾರಂಭಗೊಳಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com