ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ: ಇಬ್ಬರು ಯೋಧರು ಹುತಾತ್ಮ
ಮುಂಬೈ ಉಗ್ರ ದಾಳಿಯ ಕರಾಳ ದಿನವೇ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಭಾರತೀಯ ಸೇನೆ ಮೇಲೆ ಗುಂಡಿನ ದಾಳಿ ನಡೆಸಿದ್ದು ಪರಿಣಾಮ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
Published: 26th November 2020 04:22 PM | Last Updated: 26th November 2020 04:27 PM | A+A A-

ಭಾರತೀಯ ಸೇನೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಭಾರತೀಯ ಸೇನೆ ಮೇಲೆ ಗುಂಡಿನ ದಾಳಿ ನಡೆಸಿದ್ದು ಪರಿಣಾಮ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
2008ರ ನವೆಂಬರ್ 26ರಂದು ಉಗ್ರರು ಮುಂಬೈನಲ್ಲಿ ಭಯೋತ್ಪಾದಕ ದಾಳಿ ನಡೆಸಿದ್ದರು. ಈ ಉಗ್ರ ದಾಳಿ ನಡೆದು ಇಂದಿಗೆ 12 ವರ್ಷಗಳಾದ ಹಿನ್ನೆಲೆಯಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಗಸ್ತು ತಿರುಗುತ್ತಿದ್ದ ಭಾರತೀಯ ಯೋಧರ ತಂಡದ ಮೇಲೆ ಮೂವರು ಉಗ್ರರ ತಂಡ ಏಕಾಏಕಿ ದಾಳಿ ನಡೆಸಿತ್ತು. ಗುಂಡಿನ ದಾಳಿಯಲ್ಲಿ ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿದರು ಉಳಿಯಲಿಲ್ಲ.
ಸದ್ಯ ಗುಂಡಿನ ದಾಳಿ ನಡೆದ ಜಾಗವನ್ನು ಭಾರತೀಯ ಸೇನೆ ಸುತ್ತುವರೆದಿದ್ದು ಉಗ್ರರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
Two soldiers were critically injured & were evacuated to the nearest medical facility. However, they have succumbed to their injuries: Defence PRO, Srinagar. #JammuAndKashmir https://t.co/Y3TB2WPuK0
— ANI (@ANI) November 26, 2020