ರಾಜ್ಯಸಭೆ ಉಪ ಚುನಾವಣೆ: ಬಿಹಾರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸುಶಿಲ್ ಕುಮಾರ್ ಮೋದಿ ಕಣಕ್ಕೆ

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ನಿಧನದಿಂದ ತೆರವಾಗಿರುವ ರಾಜ್ಯಸಭೆಯ ಒಂದು ಸ್ಥಾನಕ್ಕೆ ನಡೆಯಲಿರುವ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರನ್ನು ಆಯ್ಕೆ ಮಾಡಲಾಗಿದೆ.
ಸುಶೀಲ್ ಕುಮಾರ್ ಮೋದಿ
ಸುಶೀಲ್ ಕುಮಾರ್ ಮೋದಿ

ನವದೆಹಲಿ: ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ನಿಧನದಿಂದ ತೆರವಾಗಿರುವ ರಾಜ್ಯಸಭೆಯ ಒಂದು ಸ್ಥಾನಕ್ಕೆ ನಡೆಯಲಿರುವ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರನ್ನು ಆಯ್ಕೆ ಮಾಡಲಾಗಿದೆ.

ಇತ್ತೀಚೆಗೆ ಮುಕ್ತಾಯಗೊಂಡ ಬಿಹಾರ ವಿಧಾನಸಭೆ ಚುನಾವಣೆಯ ನಂತರ ಅವರಿಗೆ ಹೊಸ ಸಚಿವ ಸಂಪುಟದಲ್ಲಿ ಸ್ಥಾನ ನಿರಾಕರಿಸಲಾಗಿತ್ತು. ಈಗ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲಾಗುತ್ತಿದೆ.

ಅಕ್ಟೋಬರ್ 8 ರಂದು ಲೋಕ ಜನಶಕ್ತಿ ಪಕ್ಷದ ಸಂಸ್ಥಾಪಕ ರಾಮ್ ವಿಲಾಸ್ ಪಾಸ್ವಾನ್ ಅವರ ನಿಧನದ ನಂತರ ರಾಜ್ಯಸಭಾ ಸ್ಥಾನ ಖಾಲಿ ಇದೆ. ಈ ಸ್ಥಾನಕ್ಕೆ ಡಿಸೆಂಬರ್ 14 ರಂದು ಚುನಾವಣೆ ನಿಗದಿಯಾಗಿದೆ. ಈ ಸ್ಥಾನಕ್ಕೆ ಮೂರನೇ ಬಾರಿ ಉಪ ಚುನಾವಣೆ ನಡೆಯುತ್ತಿದೆ.

ಈ ಹಿಂದೆ 2018ರಲ್ಲಿ ಬಿಜೆಪಿಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ ರವಿಶಂಕರ್ ಪ್ರಸಾದ್ ಅವರು 2019 ರಲ್ಲಿ ಲೋಕಸಭೆಗೆ ಆಯ್ಕೆಯಾದ ನಂತರ ರಾಜೀನಾಮೆ ನೀಡಿದ್ದರು. 2019ರ ಜೂನ್‌ನಲ್ಲಿ ರಾಮ ವಿಲಾಸ್ ಪಾಸ್ವಾನ್ ಅವರು ಬಿಜೆಪಿ ಮತ್ತು ಜೆಡಿಯು ಬೆಂಬಲದೊಂದಿಗೆ ಆಯ್ಕೆಯಾಗಿದ್ದರು. ಈಗ ಅವರ ನಿಧನದ ನಂತರ ಮೂರನೇ ಬಾರಿಗೆ ಉಪಚುನಾವಣೆ ನಡೆಯುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com