ಕೋವಿಡ್-19: ದೇಶದಲ್ಲಿ 43,082 ಕೊರೋನಾ ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 93 ಲಕ್ಷ

ದೇಶದಲ್ಲಿಂದು 43,082 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 93 ಲಕ್ಷ ಗಡಿದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ದೇಶದಲ್ಲಿಂದು 43,082 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 93 ಲಕ್ಷ ಗಡಿದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ. 

ಕಳೆದ 24 ಗಂಟೆಗಳಲ್ಲಿ 492 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 1,35,715ಕ್ಕೆ ತಲುಪಿದೆ ಎಂದು ಸಚಿವಾಲಯ ತಿಳಿಸಿದೆ. 

ದೇಶದಲ್ಲಿ ಪತ್ತೆಯಾಗಿರುವ ಒಟ್ಟು 93,09,788 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 39,379 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಗುಣಮುಖರಾದವರ ಸಂಖ್ಯೆ 87,18,517ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ದೇಶದಲ್ಲಿ ಪ್ರಸ್ತುತ 4,55,555 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ. 

ಇನ್ನು ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 10,90,238 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 13,59,31,545 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com