ಬೃಂದಾವನದ ಹೊರವಲಯದಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಹತ್ಯೆ

8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಬೃಂದಾವನದ ಹೊರವಲಯದಲ್ಲಿ ನಡೆದಿದೆ. 

Published: 28th November 2020 01:35 AM  |   Last Updated: 28th November 2020 12:30 PM   |  A+A-


Eight-year-old raped, killed in outskirts of Vrindavan in UP

ಬೃಂದಾವನದ ಹೊರವಲಯದಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಹತ್ಯೆ

Posted By : Srinivas Rao BV
Source : The New Indian Express

ಮಥುರಾ: 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಬೃಂದಾವನದ ಹೊರವಲಯದಲ್ಲಿ ನಡೆದಿದೆ. 

ಬಾಲಕಿಯ ಶವ ಪತ್ತೆಯಾಗುವುದಕ್ಕೂ ಒಂದು ದಿನ ಮುಂಚಿತವಾಗಿ ಆಕೆ ಕಾಣೆಯಾಗಿದ್ದರ ಬಗ್ಗೆ ಪೊಲೀಸ್ ಪ್ರಕರಣ ದಾಖಲಾಗಿತ್ತು. ಛತಿಕಾರದ ಮಲ್ಟಿಲೆವೆಲ್ ಪಾರ್ಕಿಂಗ್ ಪ್ರದೇಶದಲ್ಲಿ ಆಕೆಯ ಶವ ಪತ್ತೆಯಾಗಿದೆ. 

ಗುರುವಾರದಂದು ಕಾಡಿನಿಂದ ಕಟ್ಟಿಗೆಗಳನ್ನು ತರುವುದಕ್ಕಾಗಿ ಬಾಲಕಿ ಮಹಿಳೆಯೊಬ್ಬರೊಂದಿಗೆ ಹೋಗಿದ್ದ ಈ ಬಾಲಕಿ ಅಂದಿನಿಂದ ನಾಪತ್ತೆಯಾಗಿದ್ದಳು. ತನ್ನೊಂದಿಗೆ ಬಂದಿದ್ದ ಬಾಲಕಿ ನಾಪತ್ತೆಯಾಗಿದ್ದನ್ನು ಕಂಡ ಮಹಿಳೆ ಆಕೆಯನ್ನು ಹುಡುಕಲು ಯತ್ನಿಸಿದ್ದಾರೆ. ಆದರೆ ಸಿಗದೇ ಇದ್ದಾಗ ಬಾಲಕಿಯ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. 

ಗ್ರಾಮಸ್ಥರ ಸಹಾಯದೊಂದಿಗೆ ಶೋಧ ಕಾರ್ಯಾಚರಣೆ ಕೈಗೊಂಡ ಪೊಲೀಸರಿಗೆ ಶುಕ್ರವಾರದ ದಿನ ಬೆಳಿಗ್ಗೆ ಬಾಲಕಿಯ ಶವ ಪತ್ತೆಯಾಗಿದೆ. " ಮರಣೋತ್ತರ ಪರೀಕ್ಷೆಯಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿರುವುದು ಸ್ಪಷ್ಟವಾಗಿದೆ" ಎಂದು ಎಸ್ ಪಿ ಉದಯ್ ಶಂಕರ್ ಸಿಂಗ್ ಹೇಳಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Narendra Singh Tomar

ಕೃಷಿ ಕಾನೂನು ಸಂಬಂಧ ರೈತರು ಮತ್ತು ಕೇಂದ್ರದ ನಡುವಣ ಬಿಕ್ಕಟ್ಟಿಗೆ ಹೊರಗಿನ ಶಕ್ತಿಗಳು ಕಾರಣ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಹೇಳಿದ್ದಾರೆ.


Result
ಹೌದು
ಇಲ್ಲ
flipboard facebook twitter whatsapp