ಜಮ್ಮು-ಕಾಶ್ಮೀರ: ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆಯ ಮೊದಲ ಹಂತದ ಮತದಾನ ಆರಂಭ 

ಕಣಿವೆ ಪ್ರದೇಶ ಜಮ್ಮು-ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆಯ(ಡಿಸಿಸಿ) ಮೊದಲ ಹಂತದ ಮತದಾನ ಶನಿವಾರ ಬೆಳಗ್ಗೆ 7 ಗಂಟೆಗೆ ಆರಂಭವಾಗಿದೆ.
ಡಿಡಿಸಿ ಮತದಾನ ದೃಶ್ಯ
ಡಿಡಿಸಿ ಮತದಾನ ದೃಶ್ಯ

ಜಮ್ಮು-ಕಾಶ್ಮೀರ: ಕಣಿವೆ ಪ್ರದೇಶ ಜಮ್ಮು-ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆಯ(ಡಿಸಿಸಿ) ಮೊದಲ ಹಂತದ ಮತದಾನ ಶನಿವಾರ ಬೆಳಗ್ಗೆ 7 ಗಂಟೆಗೆ ಆರಂಭವಾಗಿದೆ.

ಕೇಂದ್ರಾಡಳಿತ ಪ್ರದೇಶದ 280 ಕ್ಷೇತ್ರಗಳ ಪೈಕಿ 43 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದ್ದು ಮಧ್ಯಾಹ್ನ 2 ಗಂಟೆಗೆ ಮುಕ್ತಾಯಗೊಳ್ಳಲಿದೆ. 8 ಹಂತಗಳಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್ 19ಕ್ಕೆ ಮುಕ್ತಾಯಗೊಳ್ಳಲಿದೆ. ಡಿಸೆಂಬರ್ 22ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 

ಇನ್ನು ಈ ಕೇಂದ್ರಾಡಳಿತ ಪ್ರದೇಶದ 234 ನಗರ ಸ್ಥಳೀಯ ಸಂಸ್ಥೆಗಳಿಗೆ ಸಹ ಒಟ್ಟಿಗೆ ಚುನಾವಣೆ ನಡೆಯುತ್ತಿದೆ. 
ನ್ಯಾಷನಲ್ ಕಾನ್ಫರೆನ್ಸ್, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ), ಪೀಪಲ್ಸ್ ಕಾನ್ಫರೆನ್ಸ್ ಮತ್ತು ಸಿಪಿಎಂ ಒಟ್ಟು ಸೇರಿ ಪೀಪಲ್ಸ್ ಅಲೈಯನ್ಸ್ ಫಾರ್ ಗುಪ್ಕಾರ್ ಡಿಕ್ಲರೇಶನ್ ಎಂದು ಮೈತ್ರಿಕೂಟ ಮಾಡಿಕೊಂಡಿದ್ದು ಈ ಎಲ್ಲಾ ಪಕ್ಷಗಳು ಒಟ್ಟು ಸೇರಿ ಡಿಡಿಸಿ ಚುನಾವಣೆಗೆ ಸ್ಪರ್ಧಿಸುತ್ತಿವೆ. 

ಕೋವಿಡ್-19 ಮಾರ್ಗಸೂಚಿ, ಶಿಷ್ಠಾಚಾರಗಳನ್ನು ಪಾಲಿಸಿಕೊಂಡು ಮತಗಟ್ಟೆಗಳಲ್ಲಿ ಮತದಾನ ಚಲಾಯಿಸಲು ಬರುವವರಿಗೆ ಸಕಲ ವ್ಯವಸ್ಥೆ ಮಾಡಲಾಗಿದೆ, ಕುಗ್ರಾಮಗಳಲ್ಲಿನ ಜನತೆ ಮೊದಲ ಮತ್ತು ಎರಡನೇ ಹಂತದ ಮತದಾನ ಪ್ರಕ್ರಿಯೆಯಲ್ಲಿ ಮತ ಚಲಾಯಿಸಲಿದ್ದಾರೆ. ಆರೋಗ್ಯ ಇಲಾಖೆ ಕೋವಿಡ್-19 ಮಾರ್ಗಸೂಚಿಗಳನ್ನು ಪಾಲಿಸಲಿದೆ ಎಂದು ರಾಜ್ಯ ಚುನಾವಣಾಧಿಕಾರಿ ಕೆ ಕೆ ಶರ್ಮ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com