ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 41,322 ಕೊರೋನಾ ಕೇಸ್ ಪತ್ತೆ, 485 ಮಂದಿ ಸಾವು

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 41,322 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 93,51,110ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 41,322 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 93,51,110ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ. 

ಇನ್ನು ಒಂದೇ ದಿನ 485 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 1,36,200ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ. 

ಈ ನಡುವೆ ಒಟ್ಟಾರೆ 93,51,110 ಮಂದಿ ಸೋಂಕಿತರ ಪೈಕಿ 41,452 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇದರೊಂದಿಗೆ ಈ ವರೆಗೂ ಗುಣಮುಖರಾದವರ ಸಂಖ್ಯೆ 87,59,969 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 4,54,940 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com