ನೂತನ ಕೃಷಿ ಮಸೂದೆಯನ್ನು ರೈತರು ಸರಿಯಾಗಿ ಅರ್ಥಮಾಡಿಕೊಂಡಿಲ್ಲ: ನೀತಿ ಆಯೋಗದ ಸದಸ್ಯ ರಮೇಶ್ ಚಂದ್ 

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವ ರೈತರು ಮಸೂದೆಯನ್ನು ಸಂಪೂರ್ಣವಾಗಿ ಮತ್ತು ಸರಿಯಾಗಿ ಅರ್ಥಮಾಡಿಕೊಂಡಿಲ್ಲ, ಈ ಕಾನೂನು ನಿಜವಾಗಿಯೂ ರೈತರ ಆದಾಯವನ್ನು ಹೆಚ್ಚಿಸುವ ಸಾಮರ್ಥ್ಯ ಹೊಂದಿದೆ ಎಂದು ನೀತಿ ಆಯೋಗದ ಸದಸ್ಯ ರಮೇಶ್ ಚಂದ್ ಹೇಳಿದ್ದಾರೆ.
ನಿನ್ನೆ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದ ರೈತರು
ನಿನ್ನೆ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದ ರೈತರು

ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವ ರೈತರು ಮಸೂದೆಯನ್ನು ಸಂಪೂರ್ಣವಾಗಿ ಮತ್ತು ಸರಿಯಾಗಿ ಅರ್ಥಮಾಡಿಕೊಂಡಿಲ್ಲ, ಈ ಕಾನೂನು ನಿಜವಾಗಿಯೂ ರೈತರ ಆದಾಯವನ್ನು ಹೆಚ್ಚಿಸುವ ಸಾಮರ್ಥ್ಯ ಹೊಂದಿದೆ ಎಂದು ನೀತಿ ಆಯೋಗದ ಸದಸ್ಯ ರಮೇಶ್ ಚಂದ್ ಹೇಳಿದ್ದಾರೆ.

ಕೇಂದ್ರ ಸರ್ಕಾರದ ನೂತನ ಮೂರು ರೈತ ಮಸೂದೆಗಳ ಉದ್ದೇಶ ಪ್ರತಿಭಟನಾ ನಿರತ ರೈತರು ಅರ್ಥಮಾಡಿಕೊಂಡದ್ದಕ್ಕಿಂತ ಸಂಪೂರ್ಣ ವಿರುದ್ಧವಾಗಿದೆ ಎಂದಿದ್ದಾರೆ.

ಪಿಟಿಐಗೆ ನೀಡಿರುವ ಸಂದರ್ಶನದಲ್ಲಿ ಅವರು, ಈ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ನೋಡಿದಾಗ ಅವರು ಮೂರು ಮಸೂದೆಗಳನ್ನು ಸಂಪೂರ್ಣವಾಗಿ ಮತ್ತು ಸರಿಯಾಗಿ ಅರ್ಥಮಾಡಿಕೊಂಡಂತೆ ಕಂಡುಬರುತ್ತಿಲ್ಲ, ಈ ನೂತನ ಮಸೂದೆಗಳನ್ನು ಜಾರಿಗೊಳಿಸಲು ಬಿಟ್ಟರೆ ಹಲವು ರಾಜ್ಯಗಳಲ್ಲಿನ ರೈತರ ಆದಾಯವನ್ನು ಖಂಡಿತವಾಗಿಯೂ ಹೆಚ್ಚಿಸುತ್ತದೆ. ಅವರ ಆದಾಯ ದುಪ್ಪಟ್ಟು ಆಗಬಹುದು ಎಂದರು. 

2022ಕ್ಕೆ ರೈತರ ಆದಾಯವನ್ನು ದುಪ್ಪಟ್ಟುಗೊಳಿಸಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಉದ್ದೇಶಿಸಿದೆ. 
ಕಳೆದ ಸೆಪ್ಟೆಂಬರ್ 27ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮೂರು ರೈತ ಮಸೂದೆಗಳಾದ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಮಸೂದೆ, 2020; ರೈತರು (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ, 2020; ಮತ್ತು ಅಗತ್ಯ ಸರಕುಗಳ (ತಿದ್ದುಪಡಿ) ಮಸೂದೆ 2020 ಗಳಿಗೆ ಅಂಕಿತ ಹಾಕಿದ್ದರು.

ರೈತರ ಪ್ರತಿಭಟನೆ ಬಗ್ಗೆ ಮತ್ತಷ್ಟು ಹೇಳಿದ ಅವರು, ಅಗತ್ಯ ವಸ್ತುಗಳ ಕಾಯ್ದೆಗೆ ರೂಪಾಂತರ ತರಲಾಗಿದೆ. ಬದಲಾವಣೆ ಪ್ರಕಾರ, ಅಗತ್ಯ ವಸ್ತುಗಳ ಕಾಯ್ದೆ ಹೇರಿಕೆ ಮಾಡುವಾಗ ಕೆಲವು ಷರತ್ತುಗಳನ್ನು ವಿಧಿಸಲಾಗಿದೆ.  ಮಾರ್ಪಾಡಿನ ಪ್ರಕಾರ, ಅಗತ್ಯ ಸರಕುಗಳ ಕಾಯ್ದೆಯನ್ನು ವಿಧಿಸಿದಾಗ ಮಾನದಂಡವನ್ನು ಹಾಕಲಾಗಿದೆ, ಮತ್ತು ಅಂದರೆ ಧಾನ್ಯಗಳು, ತೈಲ ಬೀಜಗಳು ಮತ್ತು ದ್ವಿದಳ ಧಾನ್ಯಗಳ ಬೆಲೆಯಲ್ಲಿ ಶೇಕಡಾ 50 ರಷ್ಟು ಹೆಚ್ಚಳವಾಗಿದ್ದರೆ ಅದನ್ನು ವಿಧಿಸಬಹುದು. ಈರುಳ್ಳಿ ಮತ್ತು ಆಲೂಗಡ್ಡೆಯ ಬೆಲೆಯಲ್ಲಿ ಶೇಕಡಾ 100 ರಷ್ಟು ಹೆಚ್ಚಳವಾಗಿದ್ದರೆ ಅಗತ್ಯ ಸರಕುಗಳ ಕಾಯ್ದೆಯನ್ನು ವಿಧಿಸಬಹುದು ಎಂದು ವಿವರಿಸಿದರು.

ಕಳೆದ ಅಕ್ಟೋಬರ್ 23ರಂದು ಕೇಂದ್ರ ಸರ್ಕಾರ ಈರುಳ್ಳಿ ಬೆಲೆ ಹೆಚ್ಚಳವಾಗುತ್ತಿರುವಾಗ ಕಾಯ್ದೆಯನ್ನು ತೆಗೆದುಹಾಕಿತು. ಈರುಳ್ಳಿ ಸಂಗ್ರಹದ ಮಿತಿ ಮಾಡುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿತು. ಇನ್ನು ಕಾರ್ಪೊರೇಟ್ ಕೃಷಿ ಮತ್ತು ಗುತ್ತಿಗೆ ಕೃಷಿ ಬಗ್ಗೆ ಸಾಕಷ್ಟು ವ್ಯತ್ಯಾಸವಿದೆ. ಭಾರತದ ಯಾವುದೇ ರಾಜ್ಯಗಳಲ್ಲಿ ಕಾರ್ಪೊರೇಟ್ ಕೃಷಿಯನ್ನು ಅನುಮತಿಸಲಾಗುವುದಿಲ್ಲ. ಗುತ್ತಿಗೆ ಕೃಷಿ ಈಗಾಗಲೇ ಅನೇಕ ರಾಜ್ಯಗಳಲ್ಲಿ ನಡೆಯುತ್ತಿದೆ ಮತ್ತು ರೈತರ ಭೂಮಿಯನ್ನು ಖಾಸಗಿ ಕಂಪನಿಗಳು ಸ್ವಾಧೀನಪಡಿಸಿಕೊಂಡಿರುವ ಒಂದು ಘಟನೆ ಕೂಡ ಬಂದಿಲ್ಲ ಎಂದು ರಮೇಶ್ ಚಂದ್ ಹೇಳುತ್ತಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com