ಖ್ಯಾತ ಸಮಾಜ ಸೇವಕ ಬಾಬಾ ಅಮ್ಟೆ ಮೊಮ್ಮಗಳು ಡಾ.ಶೀತಲ್ ಅಮ್ಟೆ ಆತ್ಮಹತ್ಯೆಗೆ ಶರಣು!

ಅಂತಾರಾಷ್ಟ್ರೀಯ ಖ್ಯಾತಿಯ ಸಮಾಜ ಸೇವಕ ಬಾಬಾ ಅಮ್ಟೆ ಅವರ ಮೊಮ್ಮಗಳು ಮತ್ತು ಆನಂದ್ ವನ್ ನಲ್ಲಿರುವ ಮಹಾರೋಗಿ ಸೇವಾ ಸಮಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಡಾ.ಶೀತಲ್ ವಿಕಾಸ್ ಅಮ್ಟೆ ಕಾರಜಿಗಿ ಸೋಮವಾರ (ನವೆಂಬರ್ 30) ಚಂದ್ರಾಪುರದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 
ಡಾ.ಶೀತಲ್ ಅಮ್ಟೆ
ಡಾ.ಶೀತಲ್ ಅಮ್ಟೆ

ಚಂದ್ರಾಪುರ: ಅಂತಾರಾಷ್ಟ್ರೀಯ ಖ್ಯಾತಿಯ ಸಮಾಜ ಸೇವಕ ಬಾಬಾ ಅಮ್ಟೆ ಅವರ ಮೊಮ್ಮಗಳು ಮತ್ತು ಆನಂದ್ ವನ್ ನಲ್ಲಿರುವ ಮಹಾರೋಗಿ ಸೇವಾ ಸಮಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಡಾ.ಶೀತಲ್ ವಿಕಾಸ್ ಅಮ್ಟೆ ಕಾರಜಿಗಿ ಸೋಮವಾರ (ನವೆಂಬರ್ 30) ಚಂದ್ರಾಪುರದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಡಾ.ಶೀತಲ್ ವಿಕಾಸ್ ಅಮ್ಟೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಕೆಯನ್ನು ಪರೀಕ್ಷಿಸಿದ ವರೋರಾ ಆಸ್ಪತ್ರೆಯ ವೈದ್ಯರು ಅವರು ಮೃತರಾದರೆಂದು ಘೋಷಿಸಿದರು.ಕೆಲ ವಿಷದ ಚುಚ್ಚುಮದ್ದನ್ನು ಆಕೆ ತೆಗೆದುಕೊಂಡಿದ್ದರೆಂದು ಮೂಲಗಳು ತಿಳಿಸಿವೆ.

ಡಾ.ಶೀತಲ್ ಅವರು ಇತ್ತೀಚೆಗೆ ಮಹಾರೋಗಿ ಸೇವಾ ಸಮಿತಿಯಅಕ್ರಮಗಳ ಬಗ್ಗೆ ಆರೋಪಗಳನ್ನು ಹೊರಿಸಿದ್ದರು ಮತ್ತು ಟ್ರಸ್ಟ್ ಮ್ಯಾನೇಜ್‌ಮೆಂಟ್ ಮತ್ತು ಅವರ ಕುಟುಂಬವನ್ನು ದೂಷಿಸಿದ್ದರು. ಈ ಗಂಭೀರ ಆರೋಪಗಳನ್ನು ಮಾಡುವ ವೀಡಿಯೊವನ್ನು ಆಕೆಯ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಪೋಸ್ಟ್ ಮಾಡಲಾಗಿದ್ದು, ನಂತರ ಅದನ್ನು ಎರಡು ಗಂಟೆಗಳಲ್ಲಿ ತೆಗೆದುಹಾಕಲಾಗಿದೆ.

ಡಾ. ಶೀತಲ್ ಅವರ ತಂದೆ ಡಾ. ವಿಕಾಸ್ ಅಮ್ಟೆ ಮತ್ತು ಅವರ ಸಹೋದರ ಡಾ.ಪ್ರಕಾಶ್ ಅಮ್ಟೆ ಅವರು ನವೆಂಬರ್ 24 ರಂದು ಜಂಟಿ ಹೇಳಿಕೆ ನೀಡಿದ್ದರು.

ಸಮಿತಿಯು ಆನಂದನ್, ಲೋಕ ಬಿರಾದಾರಿ ಯೋಜನೆ ಮತ್ತು ಇತರ ದತ್ತಿ ಯೋಜನೆಗಳನ್ನು ನಡೆಸುವ ಮೂಲ ಟ್ರಸ್ಟ್ ಆಗಿದೆ. ಡಾ.ಶೀತಲ್ ಅವರು ಟ್ರಸ್ಟ್‌ನ ಸಿಇಒ ಆಗಿದ್ದರೆ, ಆಕೆಯ ತಂದೆ ಮತ್ತು ಚಿಕ್ಕಪ್ಪ ಟ್ರಸ್ಟ್‌ನ ಕಾರ್ಯದರ್ಶಿಯಾಗಿದ್ದಾರೆ.

ಡಾ.ಶೀತಲ್ ಅವರ ಎಲ್ಲಾ ಆರೋಪಗಳನ್ನು ನಿರಾಕರಿಸಿ ಸಮಿತಿ ನವೆಂಬರ್ 22 ರಂದು ಮಾಧ್ಯಮ ಸಂಸ್ಥೆಗಳಿಗೆ ಹೇಳಿಕೆ ನೀಡಿತ್ತು. ನವೆಂಬರ್ 24 ರಂದು ಬಿಡುಗಡೆಯಾದ ಪತ್ರದಲ್ಲಿ ಡಾ.ವಿಕಾಸ್ ಅಮ್ಟೆ, ಅವರ ಪತ್ನಿ ಡಾ.ಭಾರತಿ, ಡಾ.ಪ್ರಕಾಶ್ ಅಮ್ಟೆ ಮತ್ತು ಅವರ ಪತ್ನಿ ಡಾ.ಮಂಡಕಿನಿ ಅಮ್ಟೆ ಅವರ ಸಹಿ ಇತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com