ರೈತರ ಪ್ರತಿಭಟನೆ ಬೆಂಬಲಿಸಿ ಜಾನುವಾರು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಹರಿಯಾಣ ಶಾಸಕ ರಾಜೀನಾಮೆ

ಕೇಂದ್ರ ಸರ್ಕಾರ ಹೊಸ ಕೃಷಿ ಕಾಯಿದೆಗಳನ್ನು ವಿರೋಧಿಸಿ ದೆಹಲಿಯ ಗಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿರುವ ಸಾವಿರಾರು ರೈತರಿಗೆ ತಮ್ಮ ಬೆಂಬಲ ಘೋಷಿಸಿದ ಹರಿಯಾಣ ಶಾಸಕ ಸೋಂಬೀರ್ ಸಾಂಗ್ವಾನ್ ಅವರು ಸೋಮವಾರ ರಾಜ್ಯ ಜಾನುವಾರು ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪ್ರತಿಭಟನಾನಿರತ ರೈತರು
ಪ್ರತಿಭಟನಾನಿರತ ರೈತರು

ಚಂಡೀಗಢ: ಕೇಂದ್ರ ಸರ್ಕಾರ ಹೊಸ ಕೃಷಿ ಕಾಯಿದೆಗಳನ್ನು ವಿರೋಧಿಸಿ ದೆಹಲಿಯ ಗಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿರುವ ಸಾವಿರಾರು ರೈತರಿಗೆ ತಮ್ಮ ಬೆಂಬಲ ಘೋಷಿಸಿದ ಹರಿಯಾಣ ಶಾಸಕ ಸೋಂಬೀರ್ ಸಾಂಗ್ವಾನ್ ಅವರು ಸೋಮವಾರ ರಾಜ್ಯ ಜಾನುವಾರು ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸಾಂಗ್ವಾನ್ ಅವರು ಪಕ್ಷೇತರ ಶಾಸಕರಾಗಿದ್ದು, ರಾಜ್ಯದ ಬಿಜೆಪಿ-ಜೆಜೆಪಿ ಸಮ್ಮಿಶ್ರ ಸರ್ಕಾರವನ್ನು ಬೆಂಬಲಿಸುತ್ತಿದ್ದಾರೆ.

ಸಾಂಗ್ವಾನ್ ಅವರು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದು, ನಾನು ರೈತರನ್ನು ಬೆಂಬಲಿಸಿ ನನ್ನ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ. ಇಡೀ ದೇಶದಂತೆಯೇ, ನನ್ನ ವಿಧಾನಸಭಾ ಕ್ಷೇತ್ರದ ದಾದ್ರಿಯ ರೈತರೂ ಈ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿದ್ದಾರೆ. ಈ ಪರಿಸ್ಥಿತಿಯಲ್ಲಿ, ಅವರಿಗೆ ಸಂಪೂರ್ಣ ಬೆಂಬಲ ನೀಡುವುದು ನನ್ನ ಆಧ್ಯತೆ ಮತ್ತು ನೈತಿಕ ಕರ್ತವ್ಯವಾಗಿದೆ ಎಂದು ಹೇಳಿದ್ದಾರೆ.

"ನನ್ನ ಆತ್ಮಸಾಕ್ಷಿಯನ್ನು ಆಲಿಸಿದ ನಂತರ ನಾನು ರೈತರಿಗೆ ಸಂಪೂರ್ಣ ಬೆಂಬಲ ನೀಡಿದ್ದೇನೆ" ಎಂದು ಶಾಸಕ ಪತ್ರದಲ್ಲಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರು ರೈತ ವಿರೋಧಿ ಕೃಷಿ ಮಸೂದೆ ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿ ಚಲೋ ಹೆಸರಿನಲ್ಲಿ ನಡೆಯುತ್ತಿರುವ ರೈತರ ಬೃಹತ್ ಪ್ರತಿಭಟನೆ ಸೋಮವಾರ 5ನೇ ದಿನಕ್ಕೆ ಕಾಲಿಟ್ಟಿದೆ. 

ರಾಷ್ಟ್ರ ರಾಜಧಾನಿಯಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದು, ರಾಷ್ಟ್ರ ರಾಜಧಾನಿ ಪ್ರವೇಶದ ಐದು ಪ್ರವೇಶದ್ವಾರಗಳನ್ನು ಬಂದ್ ಮಾಡುವುದಾಗಿ ಪ್ರತಿಭಟನಾ ನಿರತ ರೈತರು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com