ಭಾರತದಲ್ಲಿ ಇದುವರೆಗೆ 14 ಕೋಟಿಗೂ ಮೀರಿ ಕೊರೋನಾ ಸೋಂಕು ಪತ್ತೆ ಪರೀಕ್ಷೆ!

ಭಾರತದಲ್ಲಿ ಕೊರೋನಾ ತಪಾಸಣೆ ಪ್ರಮಾಣ ಶನಿವಾರ 14 ಕೋಟಿ ದಾಟಿದೆ. ತಪಾಸಣೆ, ಪತ್ತೆ, ಮತ್ತು ಚಿಕಿತ್ಸೆ (ಟೆಸ್ಟ್, ಟ್ರ್ಯಾಕ್ ಮತ್ತು ಟ್ರೀಟ್) ಕಾರ್ಯತಂತ್ರ ಪಾಲನೆಯಾಗುತ್ತಿರುವ ಹಿನ್ನೆಲೆಯಲ್ಲಿ ತಪಾಸಣೆ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಭಾರತದಲ್ಲಿ ಕೊರೋನಾ ತಪಾಸಣೆ ಪ್ರಮಾಣ ಶನಿವಾರ 14 ಕೋಟಿ ದಾಟಿದೆ. ತಪಾಸಣೆ, ಪತ್ತೆ, ಮತ್ತು ಚಿಕಿತ್ಸೆ (ಟೆಸ್ಟ್, ಟ್ರ್ಯಾಕ್ ಮತ್ತು ಟ್ರೀಟ್) ಕಾರ್ಯತಂತ್ರ ಪಾಲನೆಯಾಗುತ್ತಿರುವ ಹಿನ್ನೆಲೆಯಲ್ಲಿ ತಪಾಸಣೆ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. 

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ ಮತ್ತು ಸಂಘಟಿತ ಪ್ರಯತ್ನಗಳಿಂದ ದೇಶದಲ್ಲಿ 14,03,79,976 ಜನರನ್ನು ಪರೀಕ್ಷಿಸುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಲಾಗಿದೆ ಎಂದು ಐಸಿಎಂಆರ್ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ 8,76,173 ಪರೀಕ್ಷೆಗಳನ್ನು ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 14,03,79,976 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ. 

2020 ರ ಜನವರಿಯಲ್ಲಿ ಪುಣೆಯ ಪ್ರಯೋಗಾಲಯದಲ್ಲಿ ಕೇವಲ ಒಂದು ಪರೀಕ್ಷೆ ನಡೆಸಿದ್ದು, ಇಂದು 13 ಕೋಟಿ ಪರೀಕ್ಷೆಗಳ ಮೈಲಿಗಲ್ಲು ತಲುಪುವಲ್ಲಿ ಭಾರತ ಬಹಳ ದೂರ ಕ್ರಮಿಸಿದೆ. ವಿಸ್ತೃತ ಪ್ರಯೋಗಾಲಯಗಳ ಜಾಲ ಮತ್ತು ಹಲವಾರು ನೀತಿ ಕ್ರಮಗಳ ಮೂಲಕ ದೇಶಾದ್ಯಂತ ಪರೀಕ್ಷಾ ಪ್ರಮಾಣ ಹೆಚ್ಚಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com