ದಲಿತ ಯುವತಿ ಮೇಲಿನ ಅತ್ಯಾಚಾರವನ್ನು ಆಸ್ಪತ್ರೆ ವರದಿಗಳು ಖಚಿತಪಡಿಸಿಲ್ಲ: ಹತ್ರಾಸ್ ಎಸ್ ಪಿ

ನಾಲ್ವರು ಮೇಲ್ಜಾತಿಯ ಯುವಕರಿಂದ ಹಲ್ಲೆಗೊಳಗಾಗಿ ಮೃತಪಟ್ಟಿರುವ ಹತ್ರಾಸ್ ನ ದಲಿತ ಯುವತಿ ಮೇಲೆ ಅತ್ಯಾಚಾರ ನಡೆದಿದೆ ಎಂಬುದನ್ನು ಆಲಿಘಡ ಆಸ್ಪತ್ರೆಯ ವೈದ್ಯಕೀಯ ವರದಿಯಲ್ಲಿ ಖಚಿತಪಡಿಸಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್ ಪಿ) ವಿಕ್ರಾಂತ್ ವಿರ್ ಗುರುವಾರ ತಿಳಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್

ಹತ್ರಾಸ್: ನಾಲ್ವರು ಮೇಲ್ಜಾತಿಯ ಯುವಕರಿಂದ ಹಲ್ಲೆಗೊಳಗಾಗಿ ಮೃತಪಟ್ಟಿರುವ ಹತ್ರಾಸ್ ನ ದಲಿತ ಯುವತಿ ಮೇಲೆ ಅತ್ಯಾಚಾರ ನಡೆದಿದೆ ಎಂಬುದನ್ನು ಆಲಿಘಡ ಆಸ್ಪತ್ರೆಯ ವೈದ್ಯಕೀಯ ವರದಿಯಲ್ಲಿ ಖಚಿತಪಡಿಸಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್ ಪಿ) ವಿಕ್ರಾಂತ್ ವಿರ್ ಗುರುವಾರ ತಿಳಿಸಿದ್ದಾರೆ.

ಯುವತಿಗೆ ಗಾಯಗಳಾಗಿರುವ ಬಗ್ಗೆ ಆಲಿಘಡ ಮುಸ್ಲಿಂ ವಿಶ್ವವಿದ್ಯಾಲಯದ ವೈದ್ಯಕೀಯ ಕಾಲೇಜಿನ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆದರೆ, ಬಲವಂತದ ಲೈಂಗಿಕ ಕಿರುಕುಳದ ಬಗ್ಗೆ ಯಾವುದೇ ಸ್ಪಷ್ಟತೆ ನೀಡಿಲ್ಲ. ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯಾಗಿ ಕಾಯುತ್ತಿದ್ದೇವೆ. ವೈದ್ಯರು ಕೂಡಾ ಅತ್ಯಾಚಾರದ ಬಗ್ಗೆ ಖಚಿತಪಡಿಸಿಲ್ಲ ಎಂದು ಅವರು ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ದೆಹಲಿಯ ಸಪ್ಧರ್ ಜಂಗ್ ಆಸ್ಪತ್ರೆಯಲ್ಲಿ 19 ವರ್ಷದ  ಯುವತಿ ಮೃತಪಡುವ ಮುನ್ನ ಆಲಿಘಡ ಮುಸ್ಲಿಂ ವೈದ್ಯಕೀಯ ಕಾಲೇಜಿನಲ್ಲಿ ಆಕೆಗೆ ಚಿಕಿತ್ಸೆ ನೀಡಲಾಗಿತ್ತು.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿಶೇಷ ತನಿಖಾ ತಂಡವನ್ನು ರಚಿಸಿದ್ದು,ಆ ತಂಡ ಬುಧವಾರ ಸಂತ್ರಸ್ಥೆಯ ಗ್ರಾಮಕ್ಕೆ ಭೇಟಿ ನೀಡಿದ್ದು, ಕುಟುಂಬದವರೊಂದಿಗೆ ಮಾತುಕತೆ ನಡೆಸಿದೆ. ತನಿಖೆ ಮುಂದುವರೆದಿದೆ ಎಂದು ಅವರು ತಿಳಿಸಿದ್ದಾರೆ.

ಹತ್ರಾಸ್ ಗಡಿ ಭಾಗವನ್ನು ಮುಚ್ಚಲಾಗಿದ್ದು, ಜಿಲ್ಲೆಯಲ್ಲಿ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹತ್ರಾಸ್ ನಲ್ಲಿ ಐದಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ. ಮಾಧ್ಯಮಗಳಿಗೂ ಕೂಡಾ ಅವಕಾಶ ನಿರಾಕರಿಸಲಾಗಿದೆ ಎಂದು ಎಸ್ ಪಿ ಮಾಹಿತಿ ನೀಡಿದ್ದಾರೆ.

ಈ ಮಧ್ಯೆ ಉತ್ತರ ಪ್ರದೇಶ ಸರ್ಕಾರ ಮೃತಪಟ್ಟ ಯುವತಿಯ ಕುಟುಂಬಕ್ಕೆ 25 ಲಕ್ಷ ಪರಿಹಾರ ಧನ , ಮನೆ ಮತ್ತು ಕುಟುಂಬದ ಸದಸ್ಯರೊಬ್ಬರಿಗೆ ಉದ್ಯೋಗವನ್ನು ನೀಡುವುದಾಗಿ ಘೋಷಣೆ ಮಾಡಿದೆ. ತೀವ್ರಗತಿಯ ನ್ಯಾಯಾಲಯದಿಂದ ಈ ಪ್ರಕರಣದ ವಿಚಾರಣೆ ನಡೆಸುವುದಾಗಿ ಸರ್ಕಾರ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com