ಯೋಗಿಯನ್ನು ಗೋರಖ್ ನಾಥ್ ಮಠಕ್ಕೆ ವಾಪಸ್ ಕಳಿಸಿ: ಮಾಯಾವತಿ
ಉತ್ತರ ಪ್ರದೇಶದಲ್ಲಿ ಯುವತಿಯರ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವಂತೆಯೇ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಗೋರಖ್ ನಾಥ್ ಮಠಕ್ಕೆ ವಾಪಸ್ ಕಳುಹಿಸಬೇಕೆಂದು ಬಿಎಸ್ ಪಿ ವರಿಷ್ಠೆ ಮಾಯಾವತಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
Published: 01st October 2020 11:48 AM | Last Updated: 01st October 2020 12:39 PM | A+A A-

ಮಾಯಾವತಿ
ಲಖನೌ: ಉತ್ತರ ಪ್ರದೇಶದಲ್ಲಿ ಯುವತಿಯರ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವಂತೆಯೇ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಗೋರಖ್ ನಾಥ್ ಮಠಕ್ಕೆ ವಾಪಸ್ ಕಳುಹಿಸಬೇಕೆಂದು ಬಿಎಸ್ ಪಿ ವರಿಷ್ಠೆ ಮಾಯಾವತಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಹತ್ರಾಸ್ ಘಟನೆ ನಂತರ ಆರೋಪಿಗಳ ವಿರುದ್ಧ ಉತ್ತರ ಪ್ರದೇಶ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂಬ ಭರವಸೆಯಲ್ಲಿದೆ. ಆದರೆ, ಆದೇ ರೀತಿಯಲ್ಲಿ ಬಲರಾಮ್ ಪುರದಲ್ಲಿ ಮತ್ತೋರ್ವ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಉತ್ತರ ಪ್ರದೇಶದಲ್ಲಿ ಅಪರಾಧಗಳು, ಮಾಫಿಯಾಗಳು, ಅತ್ಯಾಚಾರಗಳು ನಿರಂತರವಾಗಿ ನಡೆಯುತ್ತಿರುವುದಾಗಿ ಅವರು ತಿಳಿಸಿದ್ದಾರೆ.
ಹತ್ರಾಸ್ ಘಟನೆ ನಡೆದು ಒಂದು ದಿನ ಕಳೆಯುವಷ್ಟರಲ್ಲಿ ಮತ್ತೆ ಯುವತಿಯೊಬ್ಬರ ಮೇಲೆ ಅತ್ಯಾಚಾರ ನಡೆದಿದೆ. ಮಹಿಳೆಯರಿಗೆ ರಕ್ಷಣೆ ಒದಗಿಸುವ ಸಾಮರ್ಥ್ಯ ಇಲ್ಲದಿದ್ದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜೀನಾಮೆ ನೀಡಲಿ.ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಅವರು ವಿಫಲರಾಗಿದ್ದು, ಕೇಂದ್ರ ಸರ್ಕಾರ ಅವರನ್ನು ವಾಪಸ್ ಗೋರಖ್ ಮಠಕ್ಕೆ ಕಳುಹಿಸಬೇಕೆಂದು ಮಾಯಾವತಿ ಒತ್ತಾಯಿಸಿದ್ದಾರೆ.