ಕುಪ್ವಾರಾದಲ್ಲಿ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ: ಇಬ್ಬರು ಭಾರತೀಯ ಯೋಧರು ಹುತಾತ್ಮ, ನಾಲ್ವರಿಗೆ ಗಾಯ

ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿಯಲ್ಲಿ ಪಾಕಿಸ್ತಾನ ಪಡೆಗಳು ಗುರುವಾರ ಅಪ್ರಚೋದಿತ ಮತ್ತು ಮನಸೋಚ್ಛೆ ಗುಂಡಿನ ದಾಳಿ ಮತ್ತು ಶೆಲ್ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂಘಿಸಿದ್ದು, ದಾಳಿಯಲ್ಲಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ ಎಂದು ರಕ್ಷಣಾ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.
ಭಾರತೀಯ ಸೇನೆ
ಭಾರತೀಯ ಸೇನೆ

ಶ್ರೀನಗರ: ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿಯಲ್ಲಿ ಪಾಕಿಸ್ತಾನ ಪಡೆಗಳು ಗುರುವಾರ ಅಪ್ರಚೋದಿತ ಮತ್ತು ಮನಸೋಚ್ಛೆ ಗುಂಡಿನ ದಾಳಿ ಮತ್ತು ಶೆಲ್ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂಘಿಸಿದ್ದು, ದಾಳಿಯಲ್ಲಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ ಎಂದು ರಕ್ಷಣಾ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

ಕುಪ್ವಾರಾದ ನೌಗಮ್ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಯಲ್ಲಿ ಮುಂಜಾನೆ ಪಾಕಿಸ್ತಾನ ಪಡೆಗಳು ಮುನ್ನೆಲೆ ಸೇನಾ ಶಿಬಿರಗಳು ಮತ್ತು ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಗುಂಡು ಹಾರಿಸಿವೆ ಎಂದು ವಕ್ತಾರರಾದ ಕರ್ನಲ್ ರಾಜೇಶ್ ಕಾಲಿಯಾ ಯುಎನ್‌ಐಗೆ ತಿಳಿಸಿದ್ದಾರೆ.

ಮಾನ್‍ಕೋಟ್ ಸೆಕ್ಟರ್‌ನಲ್ಲಿಯೂ ಪಾಕಿಸ್ತಾನ ಸೇನೆ ಗಡಿ ನಿಯಂತ್ರಣಾ ರೇಖೆಯುದ್ದಕ್ಕೂ ಅಪ್ರಚೋದಿತ ಗುಂಡು ಹಾರಿಸುವ ಮೂಲಕ ಪಾಕಿಸ್ತಾನ ಪಡೆಗಳು ಕದನ ವಿರಾಮವನ್ನು ಉಲ್ಲಂಘಿಸಿವೆ.

ಬುಧವಾರ ಸಂಜೆ 6.45ರ ಸುಮಾರಿಗೆ ಪಾಕ್ ಪಡೆಗಳು ಸಣ್ಣ ಶಸ್ತ್ರಾಸ್ತ್ರಗಳೊಂದಿಗೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು ಮಾತ್ರವಲ್ಲದೆ, ಮಾನ್‍ಕೋಟ್ ಸೆಕ್ಟರ್‌ನಲ್ಲಿ ಮಾರ್ಟಾರ್‌ಗಳೊಂದಿಗೆ ತೀವ್ರವಾದ ಶೆಲ್ ದಾಳಿ ನಡೆಸಿವೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ. ಪಾಕ್‍ ನ ಗುಂಡಿನ ದಾಳಿಗೆ ಭಾರತೀಯ ಸೇನೆ, ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com