ಹತ್ರಾಸ್ ಪ್ರಕರಣ: ಎಸ್‌ಪಿ, ಡಿಎಸ್‌ಪಿ ಮತ್ತು ಇತರ ಅಧಿಕಾರಿಗಳನ್ನು ಅಮಾನತುಗೊಳಿಸಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಆದೇಶ

 ಹತ್ರಾಸ್  ಅತ್ಯಾಚಾರ ಪ್ರಕರಣದ ಸಂಬಂಧ ನಡೆದ ಮಹತ್ವದ ಬೆಳವಣಿಗೆಯಲ್ಲಿ ಪ್ರಾಥಮಿಕ ತನಿಖಾ ವರದಿಯ ಆಧಾರದ ಮೇಲೆ ಪೊಲೀಸ್ ವರಿಷ್ಠಾಧಿಕಾರಿ, ಉಪ ಪೊಲೀಸ್ ವರಿಷ್ಠಾಧಿಕಾರಿ, ಇನ್ಸ್‌ಪೆಕ್ಟರ್ ಮತ್ತಿತರೆ  ಕೆಲವು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿರ್ದೇಶನ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್

ಲಖನೌ: ಹತ್ರಾಸ್  ಅತ್ಯಾಚಾರ ಪ್ರಕರಣದ ಸಂಬಂಧ ನಡೆದ ಮಹತ್ವದ ಬೆಳವಣಿಗೆಯಲ್ಲಿ ಪ್ರಾಥಮಿಕ ತನಿಖಾ ವರದಿಯ ಆಧಾರದ ಮೇಲೆ ಪೊಲೀಸ್ ವರಿಷ್ಠಾಧಿಕಾರಿ, ಉಪ ಪೊಲೀಸ್ ವರಿಷ್ಠಾಧಿಕಾರಿ, ಇನ್ಸ್‌ಪೆಕ್ಟರ್ ಮತ್ತಿತರೆ  ಕೆಲವು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿರ್ದೇಶನ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

ಎಸ್‌ಪಿ ಮತ್ತು ಡಿಎಸ್‌ಪಿಯ ನಾರ್ಕೊ ಪಾಲಿಗ್ರಾಫ್ ಪರೀಕ್ಷೆಗಳನ್ನು ಸಹ ನಡೆಸಲಾಗುವುದು ಎಂದು ಸಿಎಂಒ ತಿಳಿಸಿದೆ

ಹತ್ರಾಸ್  ನಲ್ಲಿ ನಡೆದ 19 ವರ್ಷದ ದಲಿತ ಮಹಿಳೆಸಾಮೂಹಿಕ ಅತ್ಯಾಚಾರ ಮತ್ತು ಹಲ್ಲೆ ನಡೆಸಿದ ಆರೋಪದ ವಿರುದ್ಧ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ನಂತರ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಈಪ್ರಕಟಣೆ ಬಂದಿದೆ.

ಏತನ್ಮಧ್ಯೆ, ಜಂತರ್ ಮಂತರ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವಾರು ರಾಜಕೀಯ ಮುಖಂಡರು ಬಾಗವಹಿಸಿದ್ದಾರೆ.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ, ಘಟನೆಯ ಬಗ್ಗೆ ಯಾವುದೇ ರಾಜಕೀಯ ಸಲ್ಲದುದೇಶದಲ್ಲಿ ಯಾವುದೇ ಅತ್ಯಾಚಾರದಂತಹಾ  ಘಟನೆಗಳು ನಡೆಯಬಾರದು ಎಂದು ಕೇಜ್ರಿವಾಲ್ ಹೇಳಿದರು.

ಸೆಪ್ಟೆಂಬರ್ 14 ರಂದು ಹತ್ರಾಸ್ ನ ತನ್ನ ಹಳ್ಳಿಯಲ್ಲಿರುವ ಹೊಲದಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ  ಮತ್ತು ಹಲ್ಲೆ ನಡೆದಿದೆ. ಈ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com